Header Ads
Breaking News

ಪುತ್ತೂರಿನ ಶ್ರೀ ಮೃತ್ಯುಂಜಯೇಶ್ವರ ದೇವಾಸ್ಥಾನ : ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡ ಜಾತ್ರೋತ್ಸವ

ಮುಂಡೂರು ಗ್ರಾಮದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೋತ್ಸವ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮವಾರ ಮಧ್ಯಾಹ್ನ ಸಂಪನ್ನಗೊಂಡಿತು.

ಉತ್ಸವದ ಅಂಗವಾಗಿ ಮಹಾಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ ನಂತರ ಮಹಾ ಶ್ರೀ ಮೃತ್ಯುoಜಯ ಹೋಮದ ಪೂರ್ಣಾಹುತಿ ನಡೆಯಿತು. ಸುಮಾರು 2000 ಮಂದಿ ಭಕ್ತಧಿಗಳು ಪೂಜೆಯಲ್ಲಿ ಪಾಲ್ಗೊಂಡು ಪುನೀತರಾದರು. ಸೋಮವಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ ನಡೆದು ಬಳಿಕ 9ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆಯಾಯಿತು. ಬಳಿಕ ದೈವದ ನೇಮೋತ್ಸವ ನಡೆಯಿತು. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲಿಯಾನ್ ನಡುಬೈಲುಗುತ್ತು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸುಂದರ ಗೌಡ ನಡುಬೈಲು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಮೇಶ್ ಬೈಪಡಿತ್ತಾಯ, ಶಕುಂತಳಾ ನೀಲಪ್ಪ ಪೂಜಾರಿ, ಗಣೇಶ್ ನಾಯ್ಕ ಕೋಡಿಬೈಲು, ಸೀತಾರಾಮ ಗೌಡ ಮುಂಡತ್ತೋಡಿ, ಜನಾರ್ದನ ಜೋಯಿಷ, ಜಯಾನಂದ ಆಳ್ವ, ಪ್ರಕಾಶ್ ಪುರುಷರಕಟ್ಟೆ, ಜಾತ್ರೋತ್ಸವ ಸಮಿತಿ ಉಪಾಧ್ಯಕ್ಷರಾದ ನಾಗೇಶ್ ನಾೈಕ್, ಕೊರಗಪ್ಪ ನಾಯ್ಕ, ವಸಂತ ಗೌಡ, ತಿಮ್ಮಪ್ಪ ಗೌಡ, ಬಾಲಚಂದ್ರ ಗೌಡ, ರಾಮಣ್ಣ ರೈ, ಜಯಶ್ರೀ, ಬಾಲಕೃಷ್ಣ ರೈ, ಅನಿಲ್ ಕುಮಾರ್, ಜಯರಾಮ ಪೂಜಾರಿ, ಕೋಶಾಧಿಕಾರಿ ಚಂದ್ರಶೇಖರ ಕುರೆಮಜಲು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *