Header Ads
Header Ads
Breaking News

ಪುತ್ತೂರು:ಜ.21ರಂದು ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್‌ನ ವಾರ್ಷಿಕ ಉತ್ಸವ

ಗಡಿಭಾಗದ ಮೇನಾಲದಲ್ಲಿ ಮಧುರಾ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್‌ನ ಮಧುರಾ ವಾರ್ಷಿಕ ಉತ್ಸವವು ಜ. 21 ರಂದು ನಡೆಯಲಿದೆ ಎಂದು ಸಂಚಾಲಕ ಕೆ. ಅಬೂಬಕ್ಕರ್ ಹಾಜಿ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2016 ರಲ್ಲಿ ಆರಂಭಗೊಂಡ ಮಧುರಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾಸಂಸ್ಥೆ ಕಟ್ಟಡ ನಿರ್ಮಾಣಕ್ಕೆ 2017 ರಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 2018 ರಲ್ಲಿ ಸಂಸ್ಥೆಯ ಕಚೇರಿ ಉದ್ಘಾಟನೆಗೊಂಡಿತ್ತು. ವಿದ್ಯಾಸಂಸ್ಥೆಯು ಜೂನ್ ತಿಂಗಳಲ್ಲಿ ಕಾರ್ಯಾರಂಭಿಸಿದ್ದು, ಕೇಂದ್ರೀಯ ಸಿಲೆಬಸ್‌ನಲ್ಲಿ ಎಲ್‌ಕೆಜಿ, ಯುಕೆಜಿ, ಗ್ರೇಡ್ 1, ಗ್ರೇಡ್ 2 ತರಗತಿಗಳು ನಡೆಯುತ್ತಿವೆ. ಸುಮಾರು 70 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ವಿದ್ಯಾಸಂಸ್ಥೆಯ ವಿಸ್ತರಿತ ಕಟ್ಟಡವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮವು ವಿದ್ಯಾಸಂಸ್ಥೆಯ ಸಂಚಾಲಕ ಅಬೂಬಕ್ಕರ್ ಕೆ. ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ವೆಬ್‌ಸೈಟ್ ಉದ್ಘಾಟಿಸಲಿದ್ದಾರೆ. ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು ಸ್ಮಾರ್ಟ್ ಬೋರ್ಡ್ ಉದ್ಘಾಟಿಸಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮಯ್ಯ ಮಧುರಾ ಮೊಬಲ್ ಅಪ್ಲಿಕೇಶನ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾ.ಪಂ. ಸದಸ್ಯೆ ಫೌಝಿಯಾ ಇಬ್ರಾಹಿಂ, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಶಂಕರಿ ಭಂಡಾರಿ, ಗ್ರಾ.ಪಂ. ಉಪಾಧ್ಯಕ್ಷ ಶ್ರೀರಾಂ ಪಕ್ಕಳ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ, ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಅಧ್ಯಕ್ಷ ರವಿಕಿರಣ್ ಶೆಟ್ಟಿ ಬೆದ್ರಾಡಿ, ಮಧುರಾ ವಿದ್ಯಾಸಂಸ್ಥೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ಸಂಶುದ್ದೀನ್ ಪಿ.ಕೆ., ಭಾಗವಹಿಸಲಿದ್ದಾರೆ. ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಧುರಾ ಎಜುಕೇಶನಲ್ ಟ್ರಸ್ಟ್‌ನ ಸ್ಥಾಪಕ ಡಿ.ಎ. ಖಾದರ್ ಹಾಜಿ, ಸ್ಥಾಪಕ ಟ್ರಸ್ಟಿ ಕೆ. ಮಹಮ್ಮದ್ ಮೇನಾಲ, ಅಧ್ಯಕ್ಷ ಹನೀಫ್, ವಿದ್ಯಾಸಂಸ್ಥೆಯ ಆಡಳಿತಾಽಕಾರಿ ಮಹಮ್ಮದ್ ಸಾಮು ಉಪಸ್ಥಿತರಿದ್ದರು.

Related posts

Leave a Reply