Header Ads
Header Ads
Breaking News

ಪುತ್ತೂರು:ಪತ್ರಕರ್ತರ ಸಂಘದ ಪುತ್ತೂರು ಘಟಕ ಉದ್ಘಾಟನೆ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಇದರ ಪುತ್ತೂರು ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಜುಲೈ ಏಳರಂದು ಶನಿವಾರ ನೆಹರೂನಗರದ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್ ಮಿತ್ತಡ್ಕ ಹೇಳಿದರು.ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್ ಮಿತ್ತಡ್ಕ ವಹಿಸಲಿದ್ದಾರೆ. ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು. ಪಿ.ಶಿವಾನಂದ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಎಂ.ಆರ್. ರವಿಕಾಂತೇಗೌಡ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ನಮ್ಮ ಟಿವಿ ಸಂಸ್ಥೆಯ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಮಾಧ್ಯಮಗೋಷ್ಠಿಯಲ್ಲಿ ಸಂಘದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಯೂಸುಫ್ ರೆಂಜಿಲಾಡಿ, ಉಪಾಧ್ಯಕ್ಷರಾದ ಫಾರೂಕ್ ಶೇಖ್, ಗಂಗಾಧರ ನಿಡ್ಪಳ್ಳಿ, ಖಜಾಂಚಿ ಸದಾಶಿವ ಶೆಟ್ಟಿ ಮಾರಂಗ ಉಪಸ್ಥಿತರಿದ್ದರು.

Related posts

Leave a Reply