Header Ads
Header Ads
Header Ads
Breaking News

ಪುತ್ತೂರು ಆಸ್ಪತ್ರೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ

ಪುತ್ತೂರು ಸರ್ಕಾರಿ ಆಸ್ಪತ್ರೆಗೆ ನಿನ್ನೆಯಷ್ಟೇ ದಿಢೀರ್ ಬೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಆಸ್ಪತ್ರೆಯ ಕಾರ್ಯವೈಖರಿ ಕಂಡು ಆಸ್ಪತ್ರೆ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.

ಪುತ್ತೂರು ಸರ್ಕಾರಿ ಆಸ್ಪತ್ರೆಯ ಸ್ವಚ್ಚತೆ, ರೋಗಿಗಳ ನಿರ್ವಹಣೆ ಹಾಗೂ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಹಲವು ದಿನಗಳಿಂದ ಸಾರ್ವಜನಿಕ ವಲಯದಿಂದ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬೇಟಿ ನೀಡಿ ಪರಿಶೀಲನೆ ನಡೆಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಜನ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ ಎಂಬ ನಂಬಿಕೆಯಿತ್ತು, ಆದರೆ ಪುತ್ತೂರು ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆ ನೋಡುತ್ತಿದ್ದಂತೆ ಇದು ದೂರವಾಯಿತು. ಈ ಆಸ್ಪತ್ರೆಯಲ್ಲಿ ನಿಬ್ಬಂದಿಗಳ ಕೊರತೆ ಇದೆ, ಸ್ವಚ್ಚತೆ ನೈರ್ಮಲ್ಯ ಕಿಂಚಿತ್ತೂ ಇಲ್ಲ. ಮುಖ್ಯವಾಗಿ ಫಿಜಿಶಿನ್ ಇಲ್ಲ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಶಾಸರು ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬತೆಯಲಾಗುವುದು ಎಂದರು.

Related posts

Leave a Reply