Header Ads
Breaking News

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಚತುಷ್ಪತ ಕಾಮಗಾರಿ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಲಿದೆ : ಡಾ.ರಾಜೇಂದ್ರ ಕೆ.ವಿ ಹೇಳಿಕೆ

ಪುತ್ತೂರು: ಪುತ್ತೂರು -ಉಪ್ಪಿನಂಗಡಿ ರಸ್ತೆಯ ಚತುಷ್ಪತ ಕಾಮಗಾರಿ ಸಂಬಂಧಿಸಿದಂತೆ ಜಮೀನು ಸ್ವಾಧೀನದ ವಿಚಾರದಲ್ಲಿ ಗೊಂದಲವಿದ್ದು ಶೀಘ್ರದಲ್ಲೇ ಎಲ್ಲಾ ಸಮಸ್ಯೆಗಳನ್ನು ನಿವಾರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು.

ಪುತ್ತೂರಿಗೆ ಆಗಮಿಸಿ ಮಿನಿವಿಧಾನಸೌಧದಲ್ಲಿರುವ ಸಹಾಯಕ ಆಯುಕ್ತ ಕಚೇರಿಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂದಿಸಿದ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ಪುತ್ತೂರು-ಉಪ್ಪಿನಂಗಡಿ ರಸ್ತೆಯ ಅಗಲಿಕರಣ ಕಾಮಗಾರಿ ನಡೆಯುತ್ತಿದ್ದು, ಇದೇ ರಸ್ತೆಯ ಪಕ್ಕದಲ್ಲಿ ಪುತ್ತೂರು ನಗರಕ್ಕೆ ಜಲಸಿರಿ ಯೋಜನೆಯಡಿ ಕುಡಿಯುವ ನೀರಿನ ಸರಬರಾಜು ಪೈಪ್‍ಲೈನ್ ಹಾದು ಹೋಗಿದೆ. ಇದಕ್ಕೆ ಸಂಬಂಧಿಸಿದಂತೆ 35 ಸೆಂಟ್ಸ್ ಜಮೀನು ಭೂಸ್ವಾಧೀನದ ವಿಚಾರದಲ್ಲಿ ಗೊಂದಲವಿದೆ. ಇದೇ ರೀತಿ ಕೊಳ್ತಿಗೆ ಗ್ರಾಮದಲ್ಲೂ 25 ಸೆಂಟ್ಸ್ ಭೂ ಸ್ವಾಧೀನ ವಿಚಾರದಲ್ಲಿ ಅಸ್ಪಷ್ಟತೆ ಇದೆ. ದರಪಟ್ಟಿ ನಿಗದಿ ಕುರಿತು ಚರ್ಚಿಸಲು ಸಭೆ ನಡೆಸಲಾಗಿದೆ. ಈ ವೇಳೆ ರೈತ ಮುಖಂಡರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಶೀಘ್ರದಲ್ಲೇ ಎಲ್ಲ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಸರಕಾರದ ಸೂಚನೆಯಂತೆ ಪದವಿ ಕಾಲೇಜು ತರಗತಿಗಳು ನ.17ರಿಂದ ಪ್ರಾರಂಭಗೊಳ್ಳಲಿವೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಬಳಕೆ ಸೇರಿದಂತೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ಪೌರಯುಕ್ತೆ ರೂಪಾ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *