Header Ads
Header Ads
Breaking News

ಪುತ್ತೂರು ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ:ವಿವಿಧ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಭಕ್ತವೃಂದ

ಪುತ್ತೂರು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮವು ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಜರಗಿತು.ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆಯುವುದು, ರಂಗಪೂಜೆ, ವೈದಿಕ ಮಂತ್ರಾಕ್ಷತೆ, ಶ್ರೀ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಿತು. ಷಷ್ಠಿ ಮಹೋತ್ಸವಕ್ಕೆ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ನೌಕರ ವೃಂದ, ಸಂಜಯನಗರ ಸುರಕ್ಷಾ ಸ್ತ್ರೀ ಶಕ್ತಿ ಸಂಘ, ಪಂಜಳ ಷಣ್ಮುಖ ಗೆಳೆಯರ ಬಳಗ, ಬೆದ್ರಾಳ ನಂದಿಕೇಶ್ವರ ಭಜನಾ ಮಂಡಳಿ, ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂಡಳಿ, ಕೆಮ್ಮಿಂಜೆ ಫ್ರೆಂಡ್ಸ್ ಮರೀಲು, ಯುವವಾಹಿನಿ ಪುತ್ತೂರು ಘಟಕ ಮೊದಲಾದ ಸಂಘಟನೆಗಳು ಮೂರು ದಿನಗಳ ಷಷ್ಠಿ ಮಹೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದರು.
ಇಂದು ಬೆಳಿಗ್ಗೆ ಪಂಚವಿಂಶತಿ ಕಲಶಪೂಜೆ, ಶ್ರೀ ದೇವರಿಗೆ ಸೀಯಾಳಾಭಿಷೇಕ, ಸಂಪ್ರೋಕ್ಷಣಾ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

Related posts

Leave a Reply