Header Ads
Header Ads
Breaking News

ಪುತ್ತೂರು ಪತ್ರಕರ್ತರ ಸಂಘದಿಂದ ಕೆಮ್ಮಾಯಿ ಶಾಲೆಯಲ್ಲಿ ಪರಿಸರ ದಿನ

ಪುತ್ತೂರು ಪತ್ರಕರ್ತರ ಸಂಘದ ವತಿಯಿಂದ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಕೆಮ್ಮಾಯಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಪುತ್ತೂರು ಸಹಾಯಕ ಕಮೀಷನರ್ ಎಚ್.ಕೆ.ಕೃಷ್ಣಮೂರ್ತಿ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣುಗಳು. ಪ್ರತಿಯೊಂದು ಹಂತದಲ್ಲೂ ಸಮಾಜದಲ್ಲಿರುವ ಹುಳುಕುಗಳನ್ನು ಹುಡುಕಿ ಸ್ವಚ್ಛ ಸಮಾಜ ನಿರ್ಮಾಣ ಕಾರ್ಯದಲ್ಲಿ ಭಾಗಿಗಳಾಗುತ್ತಾರೆ. ಇದೇ ರೀತಿ ಪರಿಸರ ಸಂರಕ್ಷಣೆಯ ಕಾಯಕದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಪರಿಸರ ಜಾಗೃತಿ ಮಾಡುತ್ತಿದ್ದಾರೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಪುತ್ತೂರು ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದೇವೆ. ಸಂಘ-ಸಂಸ್ಥೆಗಳು ಕೂಡಾ ಸಮಾಜದ ಮುಖ್ಯವಾಹಿನಿಗೆ ಬಂದು ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದು ಸಂಘದ ಆಶಯವಾಗಿದೆ. ಎಂದರುಕಾರ್ಯಕ್ರಮದ ಅತಿಥಿಗಳಾಗಿ ಸ್ಥಳೀಯ ನಗರಸಭಾ ಸದಸ್ಯ ಸುಂದರ ಪೂಜಾರಿ ಬಡಾವು , ಎಸ್‌ಡಿಎಂಸಿ ಅಧ್ಯಕ್ಷ ಜಿನ್ನಪ್ಪ ಗೌಡ ಕೊಲ್ಯ , ಕೆಮ್ಮಾಯಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಕುಮಾರಿ , ಪುತ್ತೂರು ವಲಯ ಅರಣ್ಯಾಧಿಕಾರಿ ಕಾರ್ಯಪ್ಪ ಮೊದಲಾದವರು ಉಪಸೀತರಿದ್ದರು.

Related posts

Leave a Reply