Header Ads
Breaking News

ಪುತ್ತೂರು : ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತ್ಯು

ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಸವಣೂರು ಸಮೀಪದ ಪರಣೆ ನಿವಾಸಿ ಹಮೀದ್ ಎಂಬವರ ಪುತ್ರ ಪುತ್ತೂರು ಖಾಸಗಿ ಪ್ರೌಢಶಾಲೆಯ ವಿದ್ಯಾರ್ಥಿ ಅಶ್ಫಾಕ್(15) ಎಂದು ಗುರುತಿಸಲಾಗಿದೆ.ಅಶ್ಫಾಕ್ ತನ್ನ ಸ್ನೇಹಿತರೊಂದಿಗೆ ಶಾಂತಿಮೊಗರು ಸೇತುವೆಯ ಬಳಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದು, ಈ ವೇಳೆ ನೀರಿನ ಸುಳಿಗೆ ಸಿಲುಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಆ ಬಳಿಕ ಸ್ಥಳೀಯ ಈಜುಗಾರರು ಬಾಲಕನಿಗಾಗಿ ಶೋಧ ನಡೆಸಿದಾಗ ಮೃತದೇಹ ಕಂಡುಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು.

Related posts

Leave a Reply

Your email address will not be published. Required fields are marked *