Header Ads
Header Ads
Breaking News

ಪುತ್ತೂರು: ಮಾ. 15 ಮತ್ತು 16ರಂದು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ನೇತೃತ್ವದಲ್ಲಿ ಮಾ.15 ಮತ್ತು 16ರಂದು ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಕೆ. ಸುಂದರ ಗೌಡ ನಡುಬೈಲು ಹೇಳಿದರು.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿ, ಮಾ.12ರಂದು ಬೆಳಗ್ಗೆ 10ಕ್ಕೆ ಶ್ರೀ ದೇವರಿಗೆ ಹಸಿರು ಹೊರಕಾಣಿಕೆ ಸಮರ್ಪಣೆ ನಡೆಯಲಿದ್ದು, ಮಾ. 15ರಂದು ಬೆಳಗ್ಗೆ ೮ಕ್ಕೆ ಧಾರ್ಮಿಕ ಕಾರ್ಯಕ್ರಮಗಳಾದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸಸ್ತಿ ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾಮೃತ್ಯುಂಜಯ ಹೋಮ ನಡೆಯಲಿದೆ. ಬೆಳಗ್ಗೆ 11ಕ್ಕೆ ಶ್ರೀ ಮಹಾಮೃತ್ಯುಂಜಯ ಹೋಮದ ಪೂರ್ಣಾಹುತಿಯಾಗಲಿದೆ.
ಮಾ. 16ರಂದು ಬೆಳಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ ನಡೆಯಲಿದ್ದು, ಬೆಳಗ್ಗೆ 9ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ನಂತರ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಟಿ. ಮಹೇಂದ್ರ ಸಾಲ್ಯಾನ್ ನಡುಬೈಲುಗುತ್ತು, ಸದಸ್ಯ ಜನಾರ್ದನ ಜೋಯಿಸ ಕುತ್ತಿಗದ್ದೆ, ಜಾತ್ರೋತ್ಸವ ಸಮಿತಿ ಉಪಾಧ್ಯಕ್ಷ ನಾಗೇಶ್ ನ್ಯಾಕ್ ನರಿಮೊಗರು, ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ಜಾತ್ರೋತ್ಸವ ಸಮಿತಿ ಜೊತೆಕಾರ್ಯದರ್ಶಿ ಗಣೇಶ್ ನಾಯ್ಕ ಕೋಡಿಬೈಲು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *