

ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಮನೆ ಪೂರ್ತಿ ಸುಟ್ಟು ಹೋದ ಘಟನೆ ಪುತ್ತೂರಿನ ಮಹಾಲಿಂಗೇಶ್ವರ ದೇವಾಸ್ಥಾನದ ದೇವಮಾರು ಗದ್ದೆಯ ಸಮೀಪದ ಮನೆಯಲ್ಲಿ ನಡೆದಿದೆ.
ಪ್ಲಾಸ್ಟಿಕ್ ಬಕೆಟ್ ಹಾಗೂ ಇತರ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಹುಣಸೂರು ಮೂಲದ ಮಂಜುನಾಥ ಎಂಬವರು ಈ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ.ಬೆಂಕಿ ಅವಘಡ ನಡೆದ ವಿಚಾರ ತಿಳಿಯುತ್ತಲೇ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದರು. ಹೀಗಾಗಿ ಯಾವುದೇ ಸಾವು ನೋವು ಉಂಟಾಗಿಲ್ಲ. ಆದರೆ ಮನೆಯೊಳಗಡೆ ಶೇಖರಿಸಿದ್ದ ಪ್ಲಾಸ್ಟಿಕ್ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿ ಅಪಾರ ನಷ್ಟ ಉಂಟಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕದಳದ ಎರಡು ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸಿದರು. ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಜೀವನಂದರ್ ಜೈನ್ ಭೇಟಿ ನೀಡಿದ್ದಾರೆ.