Header Ads
Breaking News

ಪುತ್ತೂರಿನ ಸೆಂಟ್ರಲ್ ಮಾರ್ಕೆಟ್‍ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಭೇಟಿ

ಪುತ್ತೂರಿನ ಸೆಂಟ್ರಲ್ ಮಾರ್ಕೆಟ್ ಮಳಿಗೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತರಾದ ನಾರಾಯಣ ಸ್ವಾಮಿ ಯವರು ಭೇಟಿ ನೀಡಿದ್ರು. ಬಳಿಕ ಮಾತನಾಡಿ ವ್ಯವಹಾರದ ಜೊತೆಗೆ ಸಮಾಜಮುಖಿ ಸೇವೆ ಮಾಡುತ್ತಿರುವ ಯುವಕರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು..ಈ ವೇಳೆ ಪುತ್ತೂರು ನಗರಸಭೆಯ 8 ಜನ ಕೊರೋನಾ ವಾರಿಯರ್ಸ್‍ಗಳನ್ನು ಸನ್ಮಾನಿಸಲಾಯಿತು ಹಾಗೂ ನಗರಸಭೆಗೆ ಸೆಂಟ್ರಲ್ ಮಾರ್ಕೆಟ್ ವತಿಯಿಂದ ಸ್ಯಾನಿಟೈಸರ್ ವಿತರಣೆ ಮಾಡಲಾಯಿತು..ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್, ಕೆಪಿಸಿಸಿಯ ಬಲರಾಂ, ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಫ್, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *