Header Ads
Header Ads
Breaking News

ಪುತ್ತೂರು : 2017-18ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ.

ಹೆಸರಾಂತ ಕಾಲೇಜುಗಳಲ್ಲಿ ಒಂದಾದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ೨೦೧೭-೧೮ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಿತು.


ಹೌದು, ಅನೇಕ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜುಗಳ ಪೈಕಿ ಮುಂಚೂಣಿಯಲ್ಲಿರುವ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ವಿದ್ಯಾರ್ಥಿಗಳು ಕರಿ ಕೋಟು ಉಟ್ಟು ತಲೆಗೆ ಗ್ರಾಜುವೇಷನ್ ಟೋಪಿ ಧರಿಸಿ ಕೈಯಲ್ಲಿ ಸರ್ಟಿಫಿಕೇಟ್ ಹಿಡಿದು ಸಂಭ್ರಮಪಟ್ಟರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಕರಿಸಿದ್ದಪ್ಪ, ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷರಾದ ಡಾ. ಕೆ. ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಅತಿಥಿಗಳು ಭಾರತ ಮಾತೆ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಕರಿಸಿದ್ದಪ್ಪ ಮಾತನಾಡಿ ಪದವಿ ಎನ್ನುವುದು ಕಲಿಕೆಯ ಕೊನೆಯಲ್ಲ, ಮಾನವ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಏನಾದರೊಂದು ಹೊಸ ವಿಚಾರಗಳನ್ನು ಕಲಿಯುತ್ತಲೇ ಇರುತ್ತಾರೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ ಬಾಲ್ಯಾವಸ್ಥೆಯಿಂದ ಇದುವರೆಗೆ ಹಂತ ಹಂತವಾಗಿ ಬೆನ್ನು ತಟ್ಟುವ ಅಧ್ಯಾಪಕರು ಮತ್ತು ಪೊಷಕರಿದ್ದರು ಇನ್ನು ಮುಂದೆ ನೀವಾಗಿಯೇ ಸಮಾಜದಲ್ಲಿ ಬೆಳೆಯುವ ಛಾತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

Related posts

Leave a Reply