Header Ads
Header Ads
Breaking News

ಪುದು ಗ್ರಾ.ಪಂ. ಚುನಾವಣೆ ಕಾಂಗ್ರೆಸ್ ಭರ್ಜರಿ ಗೆಲುವು ಬಿಜೆಪಿಗೆ ಮುಖಭಂಗ

ಪುದು: ಬಂಟ್ವಾಳದ ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಜಯಭೇರಿ ಬಾರಿಸಿದೆ. 34ಕ್ಷೇತ್ರಗಳ ಪೈಕಿ ಕಾಂಗ್ರೆಸ್ 24ರಲ್ಲಿ ಜಯಗಳಿಸಿದ್ದು, ಮೂರನೇ ಎರಡರಷ್ಟು ಸ್ಥಾನಗಳನ್ನು ಗಳಿಸುವತ್ತ ದಾಪುಗಾಲು ಹಾಕಿದೆ.ಇಲ್ಲಿಯವರೆಗೆ 28 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಈ ಪೈಕಿ 24ರಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಬಿಜೆಪಿ ಮೂರರಲ್ಲಿ ಮತ್ತು ಎಸ್‌ಡಿಪಿಐ ಒಂದರಲ್ಲಿ ಜಯ ಗಳಿಸಿದೆ.ಉಸ್ತುವಾರಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಮಂಗಳೂರು ಮಹಾ ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರವೂಫ್ ಮುಖಂಡತ್ವದಲ್ಲಿ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಿತ್ತು.

ಇನ್ನು ಕೆಲವೇ ವಾರಗಳಲ್ಲಿ ವಿಧಾನಸಭಾ ಚುನಾವಣೆಗಳು ಆಗಮಿಸಲಿದ್ದು, ಇದಕ್ಕೆ ಮುನ್ನ ನಡೆದ ಈ ಚುನಾವಣೆಯನ್ನು ಸೆಮಿಫೈನಲ್ ಎಂದೇ ಭಾವಿಸಲಾಗಿತ್ತು. ಆಹಾರ ಸಚಿವ ಯು.ಟಿ. ಖಾದರ್ ಅವರ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಪುದು ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಉತ್ಸಾಹವನ್ನು ತುಂಬಿದೆ.ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 34 ಸ್ಥಾನಗಳಿದ್ದು, ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಏಕಾಂಗಿಯಾಗಿ ಸ್ಪರ್ಧೆ ನಡೆಸಿದೆ.ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಪಟ್ಟರು.

Related posts

Leave a Reply