Header Ads
Header Ads
Breaking News

ಪುನರೂರು ಶ್ರೀ ವಿಶ್ವನಾಥ ದೇವಳದಲ್ಲಿ ಪುನರೂರು ಸಂಭ್ರಮ

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಶ್ರೀ ವಿಶ್ವನಾಥ ದೇವಳದಲ್ಲಿ ಪುನರೂರು ಸಂಭ್ರಮ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,
ಸಮಾಜ ಸೇವೆಯ ಮೂಲ ಉದ್ದೇಶವಿಟ್ಟುಕೊಂಡು ಪ್ರಾರಂಭವಾದ ಪುನರೂರು ಪ್ರತಿಷ್ಠಾನದ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜಸೇವೆಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲ ಆದರೆ ಸಹಾಯವನ್ನು ಪಡೆದ ಬಳಿಕ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು. ಸುವರ್ಣ ಆರ್ಟ್ಸ್ ಮಾಲಕ ಚಂದ್ರಶೇಖರ ಸುವರ್ಣ ಮಾತನಾಡಿ ಇಂದಿನ ಮಕ್ಕಳು ಟಿ.ವಿ ಮತ್ತು ಮೊಬೈಲ್ ಗಳಿಂದ ಹಾಳಾಗುತ್ತಾರೆ, ಮಕ್ಕಳಲ್ಲಿ ಸಂಸ್ಕ್ರತಿ ಸಂಸ್ಕಾರ ಬೆಳೆಸುವ ಕಾರ್ಯಕ್ರಮಗಳು ಆಗಬೇಕು ಎಂದರು.

ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಪ್ರತಿಭಾ ಸೌರಭ 2018ರ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಶಾಲೆಗಳ ಮಕ್ಕಳಿಗೆ ಬಹುಮಾನಗಳನ್ನು ನೀಡಲಾಯಿತು.

ಪುನರೂರು ಶ್ರೀ ವಿಶ್ವನಾಥ ದೇವಳದ ಆಡಳಿತ ಮೊಕ್ತೇಸರ ಪಟೇಲ್ ವೆಂಕಟೇಶ್ ರಾವ್ ಪುನರೂರು, ಉದ್ಯಮಿ ಪಟೇಲ್ ವಾಸುದೇವ ರಾವ್, ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಉದ್ಯಮಿ ಶ್ರೀಕಾಂತ್ ಶೆಟ್ಟಿ, ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ ಎಚ್ ಕೆ ಉಷಾರಾಣಿ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply