Header Ads
Header Ads
Breaking News

ಪುರಸಭಾ ವ್ಯಾಪ್ತಿಯ ಅಂಗಡಿಗಳ ಮುಂದೆ ಅನಧಿಕೃತ ಶೀಟ್ ತೆರವು ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ ನಿರ್ಣಯ

ಬಂಟ್ವಾಳ ಪುರಸಭಾ ವ್ಯಾಫ್ತಿಯ ಅಂಗಡಿಗಳ ಮುಂದೆ ಅನಧಿಕೃತವಾಗಿ ಶೀಟ್ ಅಳವಡಿಸಿರುವುದು ಹಾಗೂ ರಸ್ತೆಗೆ ತಾಗಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುವ ಅಂಗಡಿ ಹಾಗೂ ಗುಜರಿ ಅಂಗಡಿಗಳನ್ನು ತೆರವುಗೊಳಿಸಲು ಪುರಸಭೆಯ ಸಾಮಾನ್ಯ ಸಭೆ ನಿರ್ಣಯ ಕೈಗೊಂಡಿದ್ದು ಶೀಘ್ರ ತೆರವು ಕಾರ್ಯಚರಣೆ ನಡೆಸಲು ತೀರ್ಮಾನಿಸಿದೆ.

ಪುರಸಭೆಯ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ ನಿರ್ಮಲ ಬಂಟ್ವಾಳ ಯೋಜನೆಗೆ ಅಡ್ಡಿಯಾಗುತ್ತಿರುವ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಪಕ್ಕ ಅಂಗಡಿಗಳಿಗೆ ಅನಧಿಕೃತವಾಗಿ ಶೀಟ್ ಅಳವಡಿಸಿ ಸಾಮಾಗ್ರಿಗಳನ್ನು ಹೊರಗಡೆ

ಇರಿಸಿಕೊಳ್ಳುತ್ತಿರುವುದು, ಗುಜರಿ ಅಂಗಡಿಗಳ ಸಾಮಾಗ್ರಿಗಳನ್ನು ಬೇಕಾ ಬಿಟ್ಟಿ ರಸ್ತೆ ಬದಿ ದಾಸ್ತನು ಇಟ್ಟುಕೊಳ್ಳುತ್ತಿರುವ ಬಗ್ಗೆ ಬರೆದಿರುವ ಪತ್ರ ಚರ್ಚೆಗೆ ಅವಕಾಶ ಮಾಡಿಕೊಟ್ಟಿತ್ತು. ನಗರದ ಸೌಂದರ್ಯದ ದೃಷ್ಟಿಯಿಂದ ಪುರಸಭೆ ಈ ಕಾರ್ಯವನ್ನು ತಕ್ಷಣ ಮಾಡಬೇಕಿದೆ. ಈ ಬಗ್ಗೆ ನಿರ್ಲಕ್ಷ ವಹಿಸಿದ್ದಲ್ಲಿ ನ್ಯಾಯಲದ ಮೊರೆ ಹೋಗಿಯಾದರೂ ಕ್ರಮ ಜರುಗಿಸಲು ಪ್ರಯತ್ನಿಸುವುದಾಗಿ ಸದಾಶಿವ ಬಂಗೇರ ಎಚ್ಚರಿಸಿದರು. ಸದಸ್ಯರಾದ ಪ್ರವೀಣ್, ಗಂಗಾಧರ, ಶರೀಫ್, ಬಿ.ಮೋಹನ್ ಧ್ವನಿಗೂಡಿಸಿದರು. ಅಂಗಡಿಗಳ ಮುಂದಿನ ಶೀಟ್ ತೆರವುಗೊಳಿಸಲು ತಕ್ಷಣ ಕ್ರಮ ಜರುಗಿಸುವ ಬಗ್ಗೆ ಮುಖ್ಯಾಧಿಕಾರಿ ರೇಖಾ ಶೆಟ್ಟಿ ನಿರ್ಣಯ ದಾಖಲಿಸಿಕೊಂಡರು.

ಬಿ.ಸಿ.ರೋಡಿನಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ, ಈ ಬಗ್ಗೆ ಈ ಹಿಂದೆ ಹಲವು ಬಾರಿ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಕೈಕುಂಜೆ ರಸ್ತೆ ಬದಿ ವಾಹನ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತಾದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ನಾಮನಿರ್ದೇಶಿತ ಸದಸ್ಯ ಲೋಕೇಶ್ ಸುವರ್ಣ ಅಸಮಾಧಾನ ವ್ಯಕ್ತಪಡಿಸಿದರು.