Header Ads
Header Ads
Header Ads
Breaking News

ಪುರುಷರ ವಿಭಾಗದ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ ನ. 5ರಂದು ವಿಟ್ಲದ ಸರ್ಕಾರಿ ಶಾಲಾ ಮೈದಾನದಲ್ಲಿ ಆಯೋಜನೆ ಸ್ವಸ್ತಿಕ್ ಫ್ರೆಂಡ್ಸ್‌ನ ಗೌರವ ಸಲಹೆಗಾರ ಅರುಣ್ ವಿಟ್ಲ ಹೇಳಿಕೆ

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಬಂಟ್ವಾಳ ತಾಲ್ಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ಪ್ರೋ ಕಬಡ್ಡಿ ಮಾದರಿಯ ಮ್ಯಾಟ್ ಅಂಕಣದಲ್ಲಿ ಮುಕ್ತ ಪುರುಷರ ವಿಭಾಗದ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ ನವಂಬರ್ 5 ರಂದು ವಿಟ್ಲದ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸ್ವಸ್ತಿಕ್ ಫ್ರೆಂಡ್ಸ್‌ನ ಗೌರವ ಸಲಹೆಗಾರ ಅರುಣ್ ವಿಟ್ಲ ತಿಳಿಸಿದರು.

ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಉತ್ತರ ಕನ್ನಡ ಜಿಲ್ಲೆಯ ತಂಡಗಳು ಭಾಗವಹಿಸಲಿದೆ. ಪ್ರತಿ ತಂಡದಲ್ಲಿ ಎರಡು ಮಂದಿ ಅತಿಥಿ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ತಿಳಿಸಿದರು.

ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಪಂದ್ಯಾಟವನ್ನು ಉದ್ಘಾಟಿಸಲಿದ್ದು, ಸಾಯಿ ಗಣೇಶ್ ಇಂಡೇನ್ ಗ್ಯಾಸ್‌ನ ಮಾಲಕ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಸಿ.ಟಿ ರವಿ, ಕೃಷಿಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಮೊದಲಾದವರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಗೌರವಾಧ್ಯಕ್ಷ ಚಂದ್ರಹಾಸ ರೈ, ಸುಧಾಕರ್ ಸುವರ್ಣ, ರತ್ನಾಕರ ಶೆಟ್ಟಿ, ಮೊದಲಾದವರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಗೌರವ ಸಲಹೆಗಾರರಾದ ರವಿಪ್ರಕಾಶ್, ರಾಷ್ಟ್ರೀಯ ತೀರ್ಪುಗಾರ ವಿದ್ಯಾಶಂಕರ್, ಗೌರವಾಧ್ಯಕ್ಷ ನಾಗೇಶ್ ಬಸವನಗುಡಿ, ಜಯಪ್ರಕಾಶ್, ರಮೇಶ್, ಶ್ರೀನಿವಾಸ ಉಪಸ್ಥಿತರಿದ್ದರು.

Related posts

Leave a Reply