Header Ads
Breaking News

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರದ ಮೋದಿ ಸರಕಾರವು ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಯನ್ನು ಏರಿಕೆ ಮಾಡುತ್ತಿದೆ. ತನಗೆ ಸಂಸಾರವಿಲ್ಲವೆಂದು ಹೇಳುತ್ತಿರುವ ಮೋದಿಗೆ ಅಂಬಾನಿ ಮತ್ತು ಅದಾನಿಯೇ ಸಂಬಂಧಿಕರು. ಇದರಿಂದಾಗಿ ಆ ಇಬ್ಬರು ಉದ್ಯಮಿಗಳಿಗೆ ದೇಶವನ್ನು ಮಾರಾಟ ಮಾಡಲು ಹೊರಟಿದ್ದಾರೆ. ಆದ್ದರಿಂದಾಗಿಯೇ ಚುನಾವಣೆಯ ಸಂದರ್ಭದಲ್ಲಿ ಕೋಟಿ-ಕೋಟಿ ರೂಗಳು ಬಿಜೆಪಿ ನಾಯಕರುಗಳ ಅಕೌಂಟ್‍ಗೆ ಬರುತ್ತದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಆರೋಪಿಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಇತರ ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಎದುರು ನಡೆದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮಹಿಳಾ ಕಾಂಗ್ರೆಸ್‍ನ ಮೂಡುಬಿದಿರೆಯ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ಕೊರಗಪ್ಪ, ಇಕ್ಬಾಲ್ ಕರೀಂ, ಮತ್ತಿತರರು ಪ್ರತಿಭಟನೆಯಲ್ಲಿ ಬಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *