Header Ads
Header Ads
Breaking News

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ಧಾರ ಹಿನ್ನೆಲೆ : ಅವ್ಯವಹಾರದ ಕುರಿತು ತನಿಖೆ ನಡೆಸುವಂತೆ ತಹಶೀಲ್ದಾರ್‌ಗೆ ಮನವಿ

ಕಾರ್ಕಳದ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ವೇಳೆ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ನೂತನವಾಗಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನೇಮಕಗೊಂಡ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಭಕ್ತರಿಂದ ಮನವಿ ಸಲ್ಲಿಸಲಾಯಿತು. ಸೋಮವಾರ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕರುಣಾಕರ ಹೆಗ್ಡೆ, ಆದಿರಾಜ ಅಜ್ರಿ, ರವೀಂದ್ರ ಹೆಗ್ಡೆ, ಸುಬಿತ್ ಕುಮಾರ್, ಪ್ರಸಾದ್ ಶೆಟ್ಟಿ, ಸಂದೇಶ್ ಕೋಟ್ಯಾನ್, ರಮೇಶ್ ಬಿ., ದಿನೇಶ್ ಕೊರ್ಲಕೊಡಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

 

Related posts

Leave a Reply

Your email address will not be published. Required fields are marked *