Header Ads
Breaking News

ಪೇಜಾವರ ಶ್ರೀ ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ : ಕೆಟ್ಟ ಸಂದೇಶ ಬರಲ್ಲ, ಒಳ್ಳೆ ಸಂದೇಶ ಬರುತ್ತದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಹೇಳಿಕೆ

ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾದ ಹಿನ್ನಲೆಯಲ್ಲಿ ಧರ್ಮ ಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಇಂದು ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೂಜ್ಯ ಪೇಜಾವರ ಶ್ರೀ ಅನಾರೋಗ್ಯದಿಂದಿದ್ದಾರೆ. ಐಸಿಯುನಲ್ಲಿರೋದನ್ನು ನೋಡಿ ಬಂದಿದ್ದೇನೆ. ನಿಧಾನವಾಗಿ ಚೇತರಿಸುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ವಯೋಧರ್ಮ ಪ್ರಕಾರ ನಿಧಾನ ಸ್ಪಂದನೆ ಆಗ್ತಾಯಿದೆ.ಸ್ವಾಮೀಜಿಗಳಿಗೆ ಬೇರೆ ಯಾವುದೇ ಖಾಯಿಲೆ, ಅಡ್ಡ ರೋಗ ಇಲ್ಲ. ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಸ್ವಾಮೀಜಿಗೆ ಶೀಘ್ರ ಆರೋಗ್ಯ ವೃದ್ಧಿಯಾಗಲಿ. ಇಡೀ ದೇಶ ಅವರಿಗಾಗಿ ಪ್ರಾರ್ಥನೆ ಮಾಡುತ್ತಿದೆ. ಅವರು ಸದಾ ದೇವರ ಸಾನಿಧ್ಯದಲ್ಲೇ ಇದ್ದವರು ದೇವರು ಅವರನ್ನು ಶೀಘ್ರ ಗುಣಮುಖ ಮಾಡುತ್ತಾರೆ. ಅಗತ್ಯ ಇಲ್ಲದ ಅಪಪ್ರಚಾರ ಬೇಡ ಯಾರೂ ಮನಸ್ಸನ್ನು ವ್ಯಸ್ತ ಮಾಡಿಕೊಳ್ಳಬೇಡಿ ಕೆಟ್ಟ ಸಂದೇಶ ಬರಲ್ಲ, ಒಳ್ಳೆ ಸಂದೇಶ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿಶ್ವಾಸ ವ್ಯಕ್ತಪಡಿಸಿದರು.

Related posts

Leave a Reply

Your email address will not be published. Required fields are marked *