Header Ads
Breaking News

ಪೇಜ್ ಪ್ರಮುಖ್ ಬಿಜೆಪಿ ಕಾರ್ಯಕರ್ತರ ಸಮಾವೇಶ

ಪೇಜ್ ಪ್ರಮುಖ್ ಫಲಾನುಭವಿಗಳು ಹಾಗೂ ಬಿಜೆಪಿ ಕಾರ್ಯಕರ್ತರ ಸಮಾವೇಶವು ತೊಕ್ಕೊಟ್ಟು ಕಾಪಿಕಾಡ್‌ನ ಗಟ್ಟಿ ಸಮಾಜಭವನದಲ್ಲಿ ನಡೆಯಿತು. ಸಮಾವೇಶವನ್ನು ಬಿಜೆಪಿಯ ಹಿರಿಯ ಮುಖಂಡದಾರ ದೇವಪ್ಪ ಗಟ್ಟಿಯವರು ಉದ್ಘಾಟಿಸಿದರು.

ದ.ಕ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಿ, ಕೇಂದ್ರದಿಂದ ೧೬,೫೨೦ಕೋಟಿ ರೂ. ಅನುದಾನ ದಕ್ಷಿಣ ಕನ್ನಡ ಜಿಲ್ಲೆಗೆ ತರಲಾಗಿದ್ದು, ಭ್ರಷ್ಟಾಚಾರ ರಹಿತ ಸರಕಾರದ ಸಂಸದನಾಗಿ ಹೆಮ್ಮೆ ತನಗಿದೆ. ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಬೇಕಾದರೆ ಅದು ನರೇಂದ್ರ ಮೋದಿಯಿಂದ ಮಾತ್ರ ಸಾಧ್ಯ ಎಂದು ಜನಾರ್ದನ ಪೂಜಾರಿಯವರೇ ಹೇಳಿದ್ದರು. ದೇಶದ ಭದ್ರತೆಯನ್ನು ಕಾಪಾಡಲು ಸಮರ್ಥ ನಾಯಕ ನರೇಂದ್ರ ಮೋದಿಯವರೇ ಮುಂದಿನ ಎರಡು ಅವಧಿಗೆ ಪ್ರಧಾನ ಮಂತ್ರಿ ಆಗಬೇಕು ಎಂದು ಮುಲಾಯಂ ಸಿಂಗ್ ಯಾದವ್ ಅವರು ರಾಜಕಾರಣದಲ್ಲಿ ವಿರೋಧಿಗಳಾಗಿದ್ದರೂ ಹೊಗಳಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ‘ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ ಈ ದೇಶದ ಲೂಟಿಕೋರರನ್ನು ನಡುಬೀದಿಯಲ್ಲಿ ನಿಲ್ಲಿಸುತ್ತೇನೆ ಎಂದು ಸಾರಿದ್ದರು. ಅದರಂತೆ ಐಟಿ ದಾಳಿಯಾದಾಗ ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಐಟಿ ದಾಳಿಯನ್ನು ವಿರೋಧಿಸಿ ರಸ್ತೆಯಲ್ಲಿ ನಿಂತು ಪ್ರತಿಭಟಿಸಿದ್ದಾರೆ. ಅದರಿಂದ ಲೂಟಿಕೋರರು ರಸ್ತೆಗೆ ಬಂದಂತಾಗಿದೆ ಎಂದು ನುಡಿದರು.
ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ನಿಕ್, ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.
ವರದಿ: ಆರೀಪ್ ಕಲ್ಕಟ್ಟ ಉಳ್ಳಾಲ

Related posts

Leave a Reply

Your email address will not be published. Required fields are marked *