Header Ads
Breaking News

ಪೊಲೀಸ್ ತನಿಖೆಯ ಬಳಿಕ ಮೃತರಿಗೆ ಪರಿಹಾರಧನದ ಬಗ್ಗೆ ಯೋಚನೆ : ಶೋಭಾ ಕರಂದ್ಲಾಜೆ ಹೇಳಿಕೆ

ರಾಜ್ಯದಲ್ಲಿ ಕೆಎಫ್‌ಡಿ ಹಾಗೂ ಪಿಎಫ್‌ಐ ಸಂಘಟನೆ ನಿಷೇಧ ಮಾಡುವ ಕುರಿತು ಸಿರೀಯಸ್ ಆಗಿ ಕ್ರಮ ಕೈಗೊಳ್ಳುತ್ತೇವೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾತೆ. ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಲಭೆಯ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರ ಗೃಹ ಇಲಾಖೆಯಿಂದ ಇಲಾಖೆ ಮಾಹಿತಿಯನ್ನ ಪಡೆದುಕೊಳ್ಳುತ್ತಿದೆ. ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಬಗ್ಗೆ ಕೇಂದ್ರ ಸರ್ಕಾರದ ಗೃಹ ಇಲಾಖೆಗೆ ಮಾಹಿತಿ ನೀಡಿದ್ದೇವೆ. ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಕೇಂದ್ರದ ಗೃಹ ಇಲಾಖೆ ತನಿಖೆ ಮತ್ತೆ ಆರಂಭವಾಗಲಿದೆ. ಈ ಬಗ್ಗೆಸಿರೀಯಸ್ ಆಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ರು.

ಇನ್ನು ಮಂಗಳೂರಿನ ಗಲಭೆಯಲ್ಲಿ ನಾರ್ಮಲ್ ಮುಸಲ್ಮಾನರಿಲ್ಲ. ಕೇರಳದಿಂದ ಬಂದ ಜನ ಕೃತ್ಯ ಮಾಡಿದ್ದಾರೆ. ಕೇರಳದಿಂದ ಬಂದ ಜನ ಕೃತ್ಯ ಮಾಡಿದ್ದಾರೆ. ಅಶಾಂತಿ ವಾತವರಣ ನಿರ್ಮಾಣ ಮಾಡಿದವರಿಗೆ ಪಾಠ ಕಲಿಸುತ್ತೇವೆ ಅಂತಾ ಹೇಳಿದ್ರು.

ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಸರ್ಕಾರದ ಪರಿಹಾರ ನೀಡುವ ಕುರಿತು ಮಾತನಾಡಿದ ಅವರು, ಈ ಬಗ್ಗೆ ತನಿಖೆ ಬಳಿಕ ನಿರ್ಧಾರ ಮಾಡಲಾಗುತ್ತೆ. ಗಲಭೆಯಲ್ಲಿ ಭಾಗವಹಿಸಿದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಅಪರಾಧಿಗಳಿಗೆ ಪರಿಹಾರ ನೀಡಿದ ಉದಾಹರಣೆ ದೇಶದಲ್ಲಿ ಇಲ್ಲ. ಅಪರಾಧಿಗಳಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ. ಪರಿಹಾರ ಘೋಷಣೆ ಬಗ್ಗೆ ಮರು ವಿಶ್ಲೇಷಣೆ ಮಾಡುತ್ತೇವೆ ಎಂದು ಶೋಭಾ ಹೇಳಿದ್ರು

Related posts

Leave a Reply

Your email address will not be published. Required fields are marked *