Header Ads
Header Ads
Breaking News

ಪೊಲೀಸ್ ಸರ್ಪಗಾವಲಿನ ನಡುವೆ ಟಿಪ್ಪು ಜಯಂತಿ ಆಚರಣೆ ಸಚಿವ ರಮಾನಾಥ ರೈ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮಕ್ಕೂ ಮೊದಲು ಬಿಜೆಪಿ ಮುಖಂಡನ ಬಂಧನ

ಪೊಲೀಸ್ ಸರ್ಪಗಾವಲಿನ ಮಧ್ಯೆ ಮಂಗಳೂರಿನ ಜಿಪಂ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಇನ್ನೂ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಉದ್ಘಾಟಿಸಿದರು.ಈ ವೇಳೆ ಸಚಿವ ಖಾದರ್, ಶಾಸಕರಾದ ಜೆ.ಆರ್.ಲೋಬೋ , ಮೊಯಿದ್ದೀನ್ ಬಾವಾ, ಮೇಯರ್ ಕವಿತಾ ಸನಿಲ್, ಜಿಲ್ಲಾಧಿಕಾರಿ ಸಸಿಕಾಂತ್ ಸಿಂಥಲ್, ಜಿಲ್ಲಾಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ: ರವಿ ಸೇರಿದಂತೆ ಮತ್ತಿತರ ಅಧಿಕಾರಿ ಉಪಸ್ಥಿತರಿದ್ದರು.

ಇದಕ್ಕೂ ಮೊದ್ಲು ಕಾರ್ಯಕ್ರಮಕ್ಕೆಂದು ಬಂದಿದ್ದ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದರು. ಜಿಪಂ ಕಚೇರಿ ಆವರಣದಲ್ಲಿ ೫೦೦ ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಬಹುದೆಂದು ಪೊಲೀಸರು ನಿಗಾ ಇಟ್ಟಿದ್ದರು. ಕಾರ್ಯಕ್ರಮಕ್ಕೆ ಆಗಮಿಸುವ ಮಂದಿಯನ್ನೂ ತಪಾಸಣೆ ನಡೆಸಿಯೆ ಒಳಬಿಡುತ್ತಿದ್ದರು.
ಬಿಗಿ ಬಂದೋಬಸ್ತ್ ಮೂಲಕ ಟಿಪ್ಪು ಜಯಂತಿಯನ್ನು ಮಂಗಳೂರಿನಲ್ಲಿ ಆಚರಿಸಲಾಯಿತು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಉದ್ಘಾಟಿಸಿದರು.