Header Ads
Header Ads
Breaking News

ಪೊಲೀಸ್ ಹುತಾತ್ಮರ ದಿನಾಚರಣೆ : ವಿವಿಧ ಗಣ್ಯರಿಂದ ಹೂಗುಚ್ಚ ಸಮರ್ಪಿಸಿ ಗೌರವಾರ್ಪಣೆ

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಮೈದಾನ ಚಂದು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು. ಪ್ರತೀ ವರ್ಷ ಅಕ್ಟೋಬರ್ 21ರಂದು ಹುತಾತ್ಮರಾದ ಪೊಲೀಸರನ್ನು ಸ್ಮರಿಸುವ ಉದ್ದೇಶದಿಂದ ದೇಶದಾದ್ಯಂತ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯುತ್ತದೆ. ಉಡುಪಿಯಲ್ಲಿ ನಡೆದ ದಿನಾಚರಣೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಎಂ ಜೋಷಿ, ಜಿಲ್ಲಾ ಎಸ್ಪಿ ನಿಶಾ ಜೇಮ್ಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಸಮಾಜ ಸೇವಕ ನಿತ್ಯಾನಂದ ಒಳಕಾಡು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅದ್ಯಕ್ಷ ಗಣೇಶ ಪ್ರಸಾದ ಪಾಂಡೇಲು ಸೇರಿದಂತೆ ವಿವಿಧ ಗಣ್ಯರು ಪ್ರತಿಮೆಗೆ ಹೂ ಗುಚ್ಚ ಸಮರ್ಪಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಎರಡು ನಿಮಿಷಗಳ ಮೌನಾಚರಣೆ, ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಬದಲ್ಲಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಮಾತನಾಡಿ ದೇಶದ ಹೊರಗಿನ ಶತ್ರುಗಳನ್ನು ಎದುರಿಸಲು ನಮ್ಮಲ್ಲಿ ಸಶ್ಕ್ತವಾದ ಸೈನ್ಯ ಇದೆ. ಒಳಗಿನ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಕಾರ್ಯವನ್ನು ಪೊಲೀಸರು ಮಾಡುತ್ತಾರೆ. ಸಮಾಜದ ಒಳಗಿನ ಸಮಸ್ಯೆಗಳನ್ನು ಸರಿಯಾಗಿ ನಿಭಾಯಿಸಲು ಆಗದೇ ಇದ್ದರೆ. ಹೊರಗಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾದ್ಯವಿಲ್ಲ. ಮುಂದಿನ ಸವಾಲುಗಳನ್ನು ಎದುರಿಸಲುವ ನಿಟ್ಟಿನಲ್ಲಿ ನಾವು ಈಗಾಗಲೇ ಅಣಿಯಾಗುವುದು ಅಗತ್ಯವಿದೆ ಎಂದರು.

 

Related posts

Leave a Reply

Your email address will not be published. Required fields are marked *