Header Ads
Header Ads
Header Ads
Breaking News

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೊಂದಣಿಯು ಜನವಿರೋಧಿ ನೀತಿಯಾಗಿದ್ದು. ಈ ನೀತಿ ಎಲ್ಲ ಧರ್ಮದವರಿಗೂ ಕಂಟಕವಾಗಿ ಪರಿಣಮಿಸಲಿದೆ. ಜನವಿರೋಧಿ ನೀತಿ ದೇಶಕ್ಕೆ ಮಾರಕವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಚಿನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಹೇಳಿದರು.

ಅವರು ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೊಂದಣಿ ಮಸೂದೆಯನ್ನು ವಿರೋಧಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಕೇಂದ್ರ ಸರಕಾರದ ಒಂದೊಂದು ಯೋಜನೆಗಳು ಜನವಿರೋಧಿಯಾಗಿದೆ. ಮೋದಿಯವರ ನ್ಯೂ ಇಂಡಿಯಾ ಕಲ್ಪನೆ ಹಳ್ಳ ಹಿಡಿದಿದೆ. ಲಕ್ಷಾಂತರ ಯುವ ಸಮುದಾಯ ಉದ್ಯೋಗ ಇಲ್ಲದೇ ಬೀದಿದೆ ಬಿದ್ದಿದ್ದಾರೆ. ಆರ್ಥಿಕ ಹಿಂಜರಿತ ದೇಶವನ್ನು 25 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗಿದೆ ಎಂದು ಹೇಳಿದ ಅವರು ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರುವ ಮೂಲಕ ದೇಶದಲ್ಲಿ ಕೋಮುಭಾವನೆ ಬೆಳೆಯಲು ಮುಂದಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಿ.ಕೆ.ಹಮೀದ್, ಮುಖಂಡರಾದ ಬೀರಾಮೊೈದೀನ್, ಶ್ರೀಹರಿ ಕುಕ್ಕುಡೇಲು, ಭವಾನಿಶಂಕರ ಕಲ್ಮಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *