Header Ads
Breaking News

ಪೌರತ್ವ ತಿದ್ದುಪಡಿ ವಿರುದ್ಧ ವ್ಯಾಪಕ ಪ್ರತಿಭಟನೆ : ಮಂಜೇಶ್ವರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ

ಮಂಜೇಶ್ವರ: ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ವಿರೋಧಿಸಿ ರಾಜಕೀಯ ಪಕ್ಷಗಳ ನೇತಾರರು ಹಾಗೂ ಕಾರ್ಯಕರ್ತರು ಬಿಲ್ ಹರಿದು ಸುತ್ತು ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೌರತ್ವ ಕಾಯ್ದೆ 1995ನ್ನು ಬದಲಾವಣೆ ಮಾಡಿ, ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಲು ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದ ಕ್ರಮ ರಾಜಕೀಯ ಪ್ರೇರಿತವಾಗಿದೆ ಎಂದ ಪ್ರತಿಭಟಕಾರರು, ಜಾತ್ಯತೀತ ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಸ್.ಡಿ.ಪಿ.ಐ. ನೇತೃತ್ವದಲ್ಲಿ ಮಂಜೇಶ್ವರದ ಹೊಸಂಗಡಿಯಲ್ಲಿ ಹಾಗೂ ಕುಂಜತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಕುಂಜತ್ತೂರಿನಲ್ಲಿ ನಡೆದ ಪ್ರತಿಭಟನೆಗೆ ಖಲೀಲ್ ಉದ್ಯಾವರ, ಬಾಸಿತ್ ಕೊಪ್ಪಳ, ಸಕರಿಯ್ಯಾ ಉದ್ಯಾವರ, ರಹ್ಮಾನ್ ಕುಂಜತ್ತೂರು ಮೊದಲಾದವರು ನೇತೃತ್ವ ನೀಡಿದರು.

 

Related posts

Leave a Reply

Your email address will not be published. Required fields are marked *