Header Ads
Breaking News

ಪ್ರಚಾರಕ್ಕೋಸ್ಕರ ಸರ್ಕಾರ ಚೀನಾ ಆ್ಯಪ್ ಬ್ಯಾನ್ ಮಾಡಿದೆ- ಮಾಜಿ ಸಚಿವ ಯು.ಟಿ. ಖಾದರ್

ಕೇಂದ್ರ ಸರ್ಕಾರ 59 ಚೀನಾ ಆ್ಯಪ್ ಬ್ಯಾನ್ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಯು.ಟಿ ಖಾದರ್ ವಿರೋಧ ವ್ಯಕ್ತಪಡಿಸಿದ್ದಾರೆ. ಅವರು ಈ ಬಗ್ಗೆ ಮಂಗಳೂರಿನ ಸಕ್ರ್ಯೂಟ್ ಹೌಸ್‍ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚೀನಾ ಆ್ಯಪ್ ಬಂದ್ ಮಾಡಿದ್ದು ಯಾಕೆ..? ಭಾರತಕ್ಕೆ ಚೀನಾ ಆ್ಯಪ್ ಬ್ಯಾನ್‍ನಿಂದ ಲಾಭವಿಲ್ಲ. ಆ ಆ್ಯಪ್‍ನಿಮದ ಯಾವುದೇ ನಷ್ಟವೂ ಇಲ್ಲ. ಪಿಎಂ ಕೇರ್ ಫಂಡ್‍ಗೆ ಟಿಕ್‍ಟಾಕ್‍ನಿಂದ 30 ಕೋಟಿ ಬಂದಿದೆ. ಸರ್ಕಾರಕ್ಕೆ ಅವರ ಹಣವನ್ನು ತೆಗದುಕೊಳ್ಳೋಕೆ ನಾಚಿಕೆ ಆಗೋದಿಲ್ವಾ. ಆ ಹಣವನ್ನು ಸರ್ಕಾರ ವಾಪಸ್ ಕೊಡಲಿ ಅಂತ ಹೇಳಿದ್ರು. ಇನ್ನು ಚೀನಾ ಆ್ಯಪ್ ಕಂಪೆನಿಯಲ್ಲಿ ಭಾರತೀಯರೂ ಉದ್ಯೋಗದಲ್ಲಿದ್ದರು. ಈಗ ಅವರು ಕೆಲಸ ಕಳೆದುಕೊಂಡಿದ್ದಾರೆ. ಆ್ಯಪ್ ಮೂಲಕ ಭಾರತೀಯರು ಆದಾಯ ಪಡೆಯುತ್ತಿದ್ದರು. ಪ್ರಚಾರಕ್ಕೋಸ್ಕರ ಸರ್ಕಾರ ಚೀನಾ ಆ್ಯಪ್ ಬ್ಯಾನ್ ಮಾಡಿದೆ. ಈ ನಿರ್ಧಾರದಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಕುಂದಿದೆ. ಚೀನಾದವರು ಭಾರತದ ನಿರ್ಧಾರಕ್ಕೆ ನಗುವ ಪರಿಸ್ಥಿತಿ ಬಂದಿದೆ ಮಂಗಳೂರಲ್ಲಿ ಮಾಜಿ ಸಚಿವ ಯುಟಿ ಖಾದರ್ ಹೇಳಿದ್ರು. ಇನ್ನು ಪ್ರೀಯಾಂಕ ಗಾಂಧಿಗೆ ಸರ್ಕಾರದ ಬಂಗಲೆ ವಾಪಾಸ್ ವಿಚಾರವಾಗಿ ಮಾತನಾಡಿದ ಖಾದರ್, ಯುಪಿಯಲ್ಲಿ ಪ್ರಿಯಾಂಕಾ ಗಾಂಧಿ ಹವಾ ಇದೆ. ಇದರಿಂದ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಪ್ರೀಯಾಂಕ ಗಾಂಧಿಯ ತಂದೆ, ಅಜ್ಜಿಯನ್ನು ಭಯೋತ್ಪಾದಕರು ಕೊಂದಿದ್ದಾರೆ. ಹಾಗಾಗಿ ಪ್ರೀಯಾಂಕ ಗಾಂಧಿಗೂ ರಕ್ಷಣೆ ನೀಡಲಾಗಿದೆ. ದೆಹಲಿಯಲ್ಲಿ ತುಂಬಾ ಮಂದಿ ಸರ್ಕಾರಿ ಬಂಗಲೆಯಲ್ಲಿ ಇದ್ದಾರೆ. ಅವರ ಹೆಸರನ್ನು ಸರ್ಕಾರ ಬಹಿರಂಗ ಪಡಿಸಲಿ. ದ್ವೇಷದ ರಾಜಕಾರಣವನ್ನು ಜನರು ಸಹಿಸೋದಿಲ್ಲ ಅಂತ ಖಾದರ್ ಹೇಳಿದ್ರು.
ಇನ್ನು ಬಳ್ಳಾರಿಯಲ್ಲಿ ಸೋಂಕಿತರ ಅಮಾನವೀಯ ಅಂತ್ಯಸಂಸ್ಕಾರ ವಿಚಾರವಾಗಿ ಮಾತನಾಡಿದ ಖಾದರ್, ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಿದ ಅಧಿಕಾರಿಗಳ ಮೇಲೆ ಈವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆರೋಗ್ಯರ ಸಚಿವರ ಜಿಲ್ಲೆ ಅಂತಾ ರಿಯಾಯಿತಿ ಕೊಡಲಾಗಿದ್ಯಾ? ಮಪ್ರಕರಣದ ಕುರಿತು ರಾಜ್ಯ ಮಟ್ಟದ ತನಿಖೆಯಾಗಬೇಕು.ಮುಂದಿನ ದಿನದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಅಂಬುಲೆನ್ಸ್ ಸೇವೆ ಇಲ್ಲ. ಸರಿಯಾದ ಅಂತ್ಯಕ್ರಿಯೆ ಮಾಡಲು ಸರ್ಕಾರ ಸ್ಥಳ ಗುರುತಿಸಬೇಕು. ಮಂಗಳೂರಿನಲ್ಲಿ ಮಾಜಿ ಸಚಿವ ಯುಟಿ ಖಾದರ್ ಆಗ್ರಹಿಸಿದ್ರು.

Related posts

Leave a Reply

Your email address will not be published. Required fields are marked *