Header Ads
Breaking News

ಪ್ರತಿಭಾನ್ವಿತ ವಿದ್ಯಾರ್ಥಿನಿ ಆತ್ಮಹತ್ಯೆ : ಬಂಟ್ವಾಳದ ಬೆದ್ರಗುಡ್ಡೆ ಎಂಬಲ್ಲಿ ನಡೆದ ಘಟನೆ

ಬಂಟ್ವಾಳ: ಪ್ರತಿಭಾನ್ವಿತ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮ್ಟಾಡಿ ಗ್ರಾಮದ ಬೆದ್ರಗುಡ್ಡೆ ಎಂಬಲ್ಲಿ ನಡೆದಿದೆ.ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ಎಂಬಿಎ ವಿದ್ಯಾರ್ಥಿನಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಶುಕ್ರವಾರ ರಾತ್ರಿ ಊಟ ಮಾಡಿದ ಬಳಿಕ ಮಲಗಿದ್ದ ರಕ್ಷಿತ ಬೆಳಗ್ಗೆ ಎದ್ದು ನೋಡಿದಾಗ ಅಡುಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮನೆಮಂದಿ ತಿಳಿಸಿದ್ದಾರೆ. ಇತ್ತೀಚೆಗೆ ಎಂಬಿಎಯ ಸೆಮಿಸ್ಟರ್ ಪರೀಕ್ಷೆ ನಡೆದಿದ್ದು ಅದರಲ್ಲಿ ಕಡಿಮೆ ಅಂಕ ಬರಬಹುದೆಂಬ ಆತಂಕದಿಂದ ಈ ಆತ್ಮಹತ್ಯೆ ಮಾಡಿಕೊಂಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Related posts

Leave a Reply

Your email address will not be published. Required fields are marked *