Header Ads
Breaking News

ಪ್ರತಿಭಾವಂತ ಸರಕಾರಿ ಶಾಲಾ ಮಕ್ಕಳಿಗೆ ಸಹಾಯಾಧನ ಕಾರ್ಯಕ್ರಮ

ಪುತ್ತೂರು: ಶಿಕ್ಷಣವೆಂಬುದು ಮನುಷ್ಯನ ಜೀವನ ರೂಪಿಸುವ ಪ್ರಮುಖ ಅಂಗ. ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣವು ಅತ್ಯಮೂಲ್ಯ ಆಸ್ತಿಯಾಗಿದ್ದು, ಇದರಿಂದ ಜೀವನದಲ್ಲಿ ಏನೂ ಬೇಕಾದರೂ ಸಾಧಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಮೂಲಕ ಶಿಕ್ಷಣಕ್ಕೆ ಪರೋಕ್ಷ ಬೆಂಬಲ ನೀಡುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಸಹಾಯಕ ಕಮೀಷನರ್ ಎಚ್.ಕೆ. ಕೃಷ್ಣಮೂರ್ತಿ ಹೇಳಿದರು.

ಅವರು ಪುತ್ತೂರಿನ ಸನ್ನಿಧಿ ಹಾಲ್‌ನಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ನಡೆದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ-ಸಹಾಯಧನ ವಿತರಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್. ಮಾತನಾಡಿ, ನಾವೆಲ್ಲ ಇಂದು ಪಂಜರದೊಳಗೆ ಇದ್ದೇವೆ. ಆದರೆ ಪಂಜರದಲ್ಲಿ ಬಾಗಿಲು ಇದೆ ಎಂಬುದನ್ನು ಮರೆತಿದ್ದೇವೆ ಎಂದರು.ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎನ್.ಕೆ. ಗೋಪಾಲಯ್ಯ ಮತ್ತು ಪುತ್ತೂರು ತಾಲೂಕು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್ ಎಂ ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಎನ್. ಸುಂದರ ರೈ ಮೊದಲಾದವರು ಉಪಸ್ಥಿರಿದ್ದರು.

Related posts

Leave a Reply