Header Ads
Header Ads
Header Ads
Breaking News

ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಮಂಜುನಾಥನ ದರ್ಶನ ಪಡೆಯಲಿರುವ ಮೋದಿ ಮದುವಣಗಿತ್ತಿಯಂತೆ ಶೃಂಗಾರಗೊಂಡ ಶ್ರೀ ಕ್ಷೇತ್ರ

ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬರಲಿದ್ದು, ಧರ್ಮಸ್ಥಳ ಮತ್ತು ಉಜಿರೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವ ಮೋದಿಯವರು ಧರ್ಮಸ್ಥಳ ಮಂಜುನಾಥ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದಲಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಮಂತ್ರಣದಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನದ ಬಳಿಕ ಉಜಿರೆಗೆ ರಸ್ತೆ ಮಾರ್ಗದಲ್ಲಿ ಆಗಮಿಸಲಿದ್ದಾರೆ. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶದಲ್ಲಿ ಹೆಗ್ಗಡೆಯವರ ನೂತನ ಸಂಕಲ್ಪವಾದ ‘ಭೂಮಿ ತಾಯಿಯನ್ನು ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಅಭಿಯಾನವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಇದೇ ವೇಳೆ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯನ್ವಯ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದ್ದು ಅವರಿಗೆ ರುಪೇ ಕಾರ್ಡ್ ಗಳನ್ನು ಮೋದಿ ವಿತರಿಸಲಿದ್ದಾರೆ. ಸ್ವ-ಸಹಾಯ ಸಂಘಗಳ ವ್ಯವಹಾರಗಳನ್ನು ಸಂಪೂರ್ಣವಾಗಿ ನಗದು ರಹಿತವಾಗಿ ಮಾಡಿ ತಂತ್ರಾಂಶ ಆಧಾರಿತ ವ್ಯವಹಾರಗಳನ್ನು ಪ್ರೇರೇಪಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಒಪ್ಪಂದ ಮಾಡಿಕೊಳ್ಳುತ್ತಿದ್ದು ಇದಕ್ಕೆ ನಾಳೆ ಅಂಕಿತ ಬೀಳಲಿದೆ.

ಈ ಕಾರ್ಯಕ್ರಮದಲ್ಲಿ ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ನಕ್ಸಲ್ ನಿಗ್ರಹ ದಳದವರು ಧರ್ಮಸ್ಥಳ, ಉಜಿರೆ ಮತ್ತು ಕನ್ಯಾಡಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು.

Related posts

Leave a Reply