Header Ads
Header Ads
Breaking News

ಪ್ರಧಾನ ಮಂತ್ರಿಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ : ಗೋಪಾಲ ಭಂಡಾರಿ ಹೇಳಿಕೆ

ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ವಿಶ್ವದ ಗಮನ ಸೆಳೆಯುವಂತಹ ಭ್ರಷ್ಠಚಾರ ನಡೆದು ಹೋಗಿದೆ.ಅಲ್ಲದೆ ದಾಖಲೆ ಪತ್ರಗಳು ಕಳವು ಆಗಿದೆ. ದೇಶದ ಹಿತಾಸಕ್ತಿಯನ್ನು ಕಾಪಾಡುತ್ತೇನೆ ಎಂದು ಬೊಗಳೆ ಬಿಡುವ ಪ್ರಧಾನ ಮಂತ್ರಿಯವರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲಿಲ್ಲ, ಪ್ರಧಾನಿ ಮೋದಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿಯವರು ಆಗ್ರಹಿಸಿದರು.

ಈ ಬಗ್ಗೆ ಕಾರ್ಕಳದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ದೇಶದ ಕೇಂದ್ರ ಸರಕಾರ ಹಾಗೂ ರಕ್ಷಣಾ ಇಲಾಖೆಯ ರಫೆಲ್ ಯುದ್ಧ ವಿಮಾನದ ಖರೀದಿಯ ಬಗ್ಗೆ ಇಡೀ ವಿಶ್ವದ ಗಮನ ಸೆಳೆಯುವಂಥ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ರಾಹುಲ್ ಗಾಂಧಿಯವರು ಪ್ರಸ್ತಾಪ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟಿನಲ್ಲಿ ಈ ವಿಚಾರ ಚರ್ಚೆ ಆಗುವ ಸಂದರ್ಭದಲ್ಲಿ ರಫೆಲ್ ಯುದ್ಧ ವಿಮಾನದ ಮಹತ್ವದ ಕಡತ ಕಳವು ಆಗಿರುತ್ತದೆ ಎಂದು ಭಾರತ ಸರಕಾರ ಹೇಳಿಕೆಯನ್ನು ಬೇಜವಾಬ್ದಾರಿಯಿಂದ ನೀಡಿದೆ. ನಾನು ಈ ದೇಶದ ಚೌಕಿದಾರ ಹಾಗೂ ದೇಶದ ಹಿತಾಸಕ್ತಿಯನ್ನು ಕಾಪಾಡುತ್ತೇನೆ ಎಂದು ಬೊಗಳೆ ಬಿಡುವ ಪ್ರಧಾನಮಂತ್ರಿ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲಿಲ್ಲ ಎಂದು ಅರ್ಥವಾಗುತ್ತದೆ. ತಕ್ಷಣ ಪ್ರಧಾನಮಂತ್ರಿ ಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಈ ಸಂದರ್ಭದಲ್ಲಿ ಭಂಡಾರಿ ಅವರು ಹೇಳಿದರು.

Related posts

Leave a Reply

Your email address will not be published. Required fields are marked *