Header Ads
Breaking News

ಪ್ರಭಾವಿ ವ್ಯಕ್ತಿಗಳ ಹೆಸರು ಹೇಳಿ ಸಾರ್ವಜನಿಕರಿಂದ ಹಣ ವಸೂಲಿ ಆರೋಪ : ವಾಟ್ಸ್‍ಆಪ್ ಗ್ರೂಪ್‍ವೊಂದರ ಅಡ್ಮಿನ್‍ನ ಬಂಧನ

ಪ್ರಭಾವಿ ವ್ಯಕ್ತಿಗಳ ಹೆಸರು ಹೇಳಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿ ವಾಟ್ಸ್‍ಆಪ್ ಗ್ರೂಪ್‍ವೊಂದರ ಅಡ್ಮಿನ್ ಅನ್ನು ಮಂಗಳೂರು ಸಿಸಿಬಿ ಪೊಲೀಸ್ ರು ಬಂಧಿಸಿದ್ದಾರೆ.
‘ಕನಕ’ ಎಂಬ ವಾಟ್ಸ್‍ಆಪ್ ಗ್ರೂಪ್ ನ ಅಡ್ಮಿನ್ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಅಬ್ದುಲ್ ರಶೀದ್ ಕುಂಡಡ್ಕ ಬಂಧಿತ ಆರೋಪಿ. ಈತ ಪೊಲೀಸ್    ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರನ್ನು ಹೇಳಿ ದುರುಪಯೋಗಪಡಿಸಿಕೊಂಡು ವಸೂಲಿ ಮಾಡುತ್ತಿದ್ದ ಎಂದು ಪೊಲೀಸ್ ರು ಆರೋಪಿಸಿದ್ದಾರೆ.

ಆರೋಪಿ ರಶೀದ್, ಕುಖ್ಯಾತ ರೌಡಿ ಹಾಗೂ ಜ್ಯುವೆಲ್ಲರಿ ದರೋಡೆ ಪ್ರಕರಣವೊಂದರ ಪ್ರಮುಖ ಆರೋಪಿ ಮುತ್ತಾಸಿಮ್ ತಸ್ಲೀಂ ಎಂಬಾತನ ಕೊಲೆ ಪ್ರಕರಣದಲ್ಲಿ ಸಿಲುಕಿರುವ ವ್ಯಕ್ತಿಯೊಬ್ಬನ ಹೆಸರನ್ನು ಪ್ರಕರಣದಿಂದ ತೆಗೆಸುತ್ತೇನೆ, ತನಗೆಪೊಲೀಸ್ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿ 20 ಲಕ್ಷ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದನು. ಅಲ್ಲದೇ 4 ಲಕ್ಷ ರೂ. ಸುಲಿಗೆ ಪಡೆದಿರುವುದಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ರಶೀದ್‍ನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸ್ರು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುವುದಾಗಿ ಪೊಲೀಸ್ರು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *