Header Ads
Breaking News

ಪ್ರಮೋದ್ ಮಧ್ವರಾಜ್‌ಗೆ ಬಂಡಾಯದ ಬಿಸಿ: ಪಕ್ಷೇತರ ಸ್ಪರ್ಧೆಗೆ ಅಮೃತ್ ಶೆಣೈ ಸಜ್ಜು

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿನ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗೆ ಬಂಡಾಯದ ಬಿಸಿ ತಟ್ಟುವ ಸಾಧ್ಯತೆಯಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ನೀಡದ ಬಗ್ಗೆ ನೊಂದುಕೊಂಡಿರುವ ಎಐಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಮೃತ್ ಶೆಣೈ ಪಕ್ಷೇತರನಾಗಿ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ. ಮೈತ್ರಿ ಧರ್ಮದಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿತ್ತು. ಆದರೆ ಜೆಡಿಎಸ್‌ಗೆ ಸೂಕ್ತ ಅಭ್ಯರ್ಥಿಯೇ ಇಲ್ಲದ ಕಾರಣ ಕಾಂಗ್ರೆಸ್ ನ ಪ್ರಮೋದ್ ಮಧ್ವರಾಜ್ ಜೆಡಿಎಸ್‌ನಿಂದ ಬಿಫಾರಂ ಪಡೆದು ಕಣಕ್ಕಿಳಿದಿದ್ದಾರೆ. ಅಸ್ತಿತ್ವವೇ ಇಲ್ಲದ ಪಕ್ಷಕ್ಕೆ ಟಿಕೆಟ್ ನೀಡಿರೋದರಿಂದ ಕಾಂಗ್ರೆಸ್ ಕಾರ್ಯಕರ್ತರು ಬೇಸರಗೊಂಡಿದ್ದರು. ಇದೀಗ ಟಿಕೆಟ್ ಆಕಾಂಕ್ಷಿಯಾಗಿದ್ದ ಅಮೃತ್ ಶೆಣೈ, ಬಂಡಾಯವಾಗಿ ಪಕ್ಷೇತರ ಸ್ಪರ್ಧೆಗಿಳಿಯಲು ಚಿಂತನೆ ನಡೆಸಿದ್ದಾರೆ. ತನ್ನ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನಕ್ಕೆ ಬರುವುದಾಗಿ ತಿಳಿಸಿದ್ದಾರೆ. ಶೆಣೈ ಕಣಕ್ಕಿಳಿದರೆ ಕಾಂಗ್ರೆಸ್ ಕಾರ್ಯಕರ್ತರ ವೋಟು ಡೈವರ್ಟ್ ಆಗುವ ಸಾಧ್ಯತೆಯಿದ್ದು ಪ್ರಮೋದ್ ಮಧ್ವರಾಜ್ ಅಮೃತ್ ಶೆಣೈ ಅವರ ಮನವೊಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

Leave a Reply

Your email address will not be published. Required fields are marked *