Header Ads
Breaking News

ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿ: ಅಧಿಕಾರಿಗಳಿಗೆ ಡಿಸಿ ಸಸಿಕಾಂತ್ ಸೆಂಥಿಲ್ ಆದೇಶ

ಮಂಗಳೂರು: ಕಳೆದ ಮುಂಗಾರಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪವನ್ನು ಹಿನ್ನಲೆಯಾಗಿರಿಸಿ, ಪ್ರಸಕ್ತ ಸಾಲಿನಲ್ಲಿ ಪ್ರಾಕೃತಿಕ ವಿಕೋಪವನ್ನು ನಿಭಾಯಿಸಲು ತಹಸೀಲ್ದಾರ್ ಮಟ್ಟದಲ್ಲಿ ಸ್ಥಳೀಯವಾಗಿ ಯೋಜನೆ ರೂಪಿಸಿ ಸಜ್ಜಾಗುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಇಲಾಖೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಸುಸ್ಸಜ್ಜಿತ ಕಂಟ್ರೋಲ್ ರೂಂ ಈಗಾಗಲೇ ಅನುಷ್ಠಾನದಲ್ಲಿದ್ದು, ತಾಲೂಕು ಮಟ್ಟದಲ್ಲಿ ಕಳೆದ ವರ್ಷ ಎದುರಿಸಿದ ವಿಕೋಪವನ್ನು ಗಮನದಲ್ಲಿರಿಸಿ ಒಳ್ಳೆಯ ಕೆಲಸಗಾರರನ್ನು ಗುರುತಿಸಿ ತಂಡ ಕಟ್ಟಿಕೊಂಡು ಕಂಟ್ರೋಲ್ ರೂಂ ಮುಖಾಂತರವೇ ಅಗತ್ಯ ಇರುವ ಕಡೆ ತಲುಪಲು ಸಾಧ್ಯವಾಗುವಂತೆ ನೆಟ್‌ವರ್ಕ್ ನಿರ್ಮಿಸಿ ಎಂದು ಜಿಲ್ಲಾಧಿಕಾರಿಗಳು ತಾಲೂಕು ದಂಡಾಧಿಕಾರಿಗಳಿಗೆ ಸಲಹೆ ಮಾಡಿದರು.

ಮಹಾ ನಗರಪಾಲಿಕೆ ಹಾಗೂ ನಗರಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಮುಚ್ಚಿರುವ ನಾಲಾಗಳನ್ನು ತೆರವುಗೊಳಿಸಿ, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದರೆ ನಗರದ ನೆರೆಗೆ ಅವಕಾಶವಿರುವುದಿಲ್ಲ; ಈ ಎಲ್ಲ ಕೆಲಸಗಳು ಶೀಘ್ರವಾಗಿ ಮುಗಿಯಬೇಕು. ಈ ಮಾದರಿಯ ಕೆಲಸಗಳಿಗೆ ಟೆಂಡರ್ ಕರೆಯಲು ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟ ಪಡಿಸಿದರು.

ಮಳೆಗಾಲದಲ್ಲಿ ಸ್ಥಳೀಯ ಪ್ರದೇಶಕ್ಕೆ ಸೀಮಿತವಾಗಿ ಮಕ್ಕಳ ಸುರಕ್ಷೆಯನ್ನು ಗಮನದಲ್ಲಿರಿಸಿ ತಹಸೀಲ್ದಾರ್ ಅವರು ಡಿಡಿಪಿಐ ಅಥವಾ ಬಿಇಒ ಗಳೊಂದಿಗೆ ಸಮಾಲೋಚಿಸಿ ರಜೆ ನೀಡಿ ಎಂದು ಈ ಸಂದರ್ಭದಲ್ಲಿ ವಿವರಿಸಿದರು. ಶಿರಾಡಿ, ಚಾರ್ಮಾಡಿಯಲ್ಲಿ ಪಟ್ರೋಲಿಂಗ್‌ಗೆ ವಾಹನವೊಂದನ್ನು ನಿಯೋಜಿಸಿ, ಅಲ್ಲಿ ಗುಡ್ಡ ಕುಸಿತಗಳು ಸಂಭಿಸಿವಿಸಿದರೆ ತುರ್ತು ನೆರವಿಗೆ ಸಜ್ಜಾಗಿ ಎಂದು ಪುತ್ತೂರು ಮತ್ತು ಬೆಳ್ತಂಗಡಿ ತಹಸೀಲ್ದಾರ್ ಅವರಿಗೆ ಹಾಗೂ ಸಹಾಯಕ ಆಯುಕ್ತರಾದ ಕೃಷ್ಣ ಮೂರ್ತಿ ಅವರಿಗೆ ಸೂಚನೆಗಳನ್ನು ನೀಡಿದರು.

Related posts

Leave a Reply

Your email address will not be published. Required fields are marked *