Header Ads
Header Ads
Breaking News

ಪ್ರಾದೇಶಿಕ ಚಲನಚಿತ್ರಗಳಿಗೆ ಬಜೆಟ್‌ನಲ್ಲಿ ಒಂದು ಕೋಟಿ ರೂ ಅನುದಾನ ನೀಡಿರುವುದಕ್ಕೆ ಅಭಿನಂದನೆ : ಆರ್. ಧನರಾಜ್

ರಾಜ್ಯ ಸರ್ಕಾರ ಮಂಡಿಸಿದ ಎರಡನೇ ಬಜೆಟ್‌ನಲ್ಲಿ ಕರ್ನಾಟಕ ಪ್ರಾದೇಶಿಕ ಚಲನಚಿತ್ರಗಳಿಗೆ 2019-20ರ ಬಜೆಟ್‌ನಲ್ಲಿ ಅನುದಾನ ನೀಡಿರುವುದಕ್ಕೆ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಆರ್. ಧನರಾಜ್ ಅವರು ಆಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಕರ್ನಾಟಕ ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘ ಇತ್ತೀಚೆಗೆ ಪ್ರಾರಂಭವಾಗಿದ್ದು, ಈ ಹಿಂದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಒಟ್ಟು 10 ಸಬ್ಸಿಡಿ ಪ್ರಾದೇಶಿಕ ಚಲನಚಿತ್ರಗಳಿಗೆ ನೀಡಬೇಕೆಂದು ಒತ್ತಾಯಿಸಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮತ್ತು ನಟ ಸುಮನ್ ತಳವಾರ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಒಂದು ಕೋಟಿ ರೂಪಾಯಿ ಅನುದಾನ ನೀಡುವಲ್ಲಿ ಶ್ರಮಿಸಿದ್ದಾರೆ ಅವರಿಗೆ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಪ್ರವೀಣ್ ಕುಮಾರ್ ಕೊಂಚಾಡಿ ಉಪಸ್ಥಿತರಿದ್ದರು.

Related posts

Leave a Reply