Header Ads
Breaking News

ಪ್ರಿಯಾಂಕ ರೆಡ್ಡಿ ಅತ್ಯಾಚಾರ ಕೊಲೆ ಪ್ರಕರಣ : ಮಂಗಳೂರು ಕ್ಷೇತ್ರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೊಂಬತ್ತಿ ಹಿಡಿದು ಪ್ರತಿಭಟನೆ

ಉಳ್ಳಾಲ: ಅರಬ್ ದೇಶದಲ್ಲಿ ಅತ್ಯಾಚಾರ ನಡೆದ ಕೆಲವೇ ದಿನಗಳಲ್ಲಿ ಸಾರ್ವಜನಿಕವಾಗಿ ಗಲ್ಲಿಗೇರಿಸುವ ಕಠಿಣ ಶಿಕ್ಷೆ ನೀಡಲಾಗುತ್ತದೆ, ಅಂತಹ ಕಾನೂನು ನಮ್ಮ ದೇಶದಲ್ಲೂ ಜಾರಿಗೆ ಬರಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್  ಕುಮಾರ್ ಶೆಟ್ಟಿ ಆಗ್ರಹಿಸಿದರು.ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಕೃತ್ಯವನ್ನು ಖಂಡಿಸಿ ನಿನ್ನೆ ರಾತ್ರಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.

ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮನುಕುಲಕ್ಕೆ ಆಗಿರುವ ಅವಮಾನಮಾನವಾಗಿದೆ. ಇದೊಂದು ಹೀನಕೃತ್ಯವೂ ಅಗಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ‘ಬೇಟಿ ಪಡಾವೋ, ಬೇಟಿ ಬಚಾವೋ’ ಎಂದು ಹೇಳುತ್ತಾರೆ, ಆದರೆ ಇದು ಕೇವಲ ಶ್ಲೋಗನ್ ಅಗಿ ಉಳಿಯಬಾರದು. ದೇಶದ ಹೆಣ್ಮಕ್ಕಳನ್ನು ರಕ್ಷಿಸಲು ಕಠಿಣ ಕಾನೂನು ಜಾರಿಗೆ ತರಬೇಕಾಗಿದೆ. ಅರಬ್ ದೇಶದಲ್ಲಿರುವಂತೆ ಸಾರ್ವಜನಿಕ ಗಲ್ಲಿಗೇರಿಸುವ ಕಾನೂನು ನಮ್ಮ ದೇಶದಲ್ಲೂ ಜಾರಿಗೆ ಬಂದಾಗ ಹೆಣ್ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಬಹುದು. ಇಂತಹ ಪ್ರಕರಣಸ ವಿರುದ್ಧ ದೇಶದ ಜನರು ಒಂದಾಗಬೇಕಿದೆ ಎಂದು ಹೇಳಿದರು.
ಈ ಸಂದರ್ಭ ಉಳ್ಳಾಲ ನಗರಸಭೆಯ ಮಾಜಿ ಸದಸ್ಯ ದಿನೇಶ್ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುರೇಶ್ ಭಟ್ನಗರ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್, ಸಂಘಟನಾ ಕಾರ್ಯದರ್ಶಿಗಳಾದ ಇಕ್ಬಾಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *