Header Ads
Header Ads
Breaking News

ಪ.ಗೋ. ಪ್ರಶಸ್ತಿ ಪ್ರದಾನ ಸಮಾರಂಭ ಪ್ರಶಾಂತ್ ಎಸ್. ಸುವರ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ. ಗೋ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನ ಲೇಡಿಹಿಲ್ ಪತ್ರಿಕಾ ಭವನದಲ್ಲಿ ನಡೆಯಿತು.ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯವಾಣಿ ದಿನ ಪತ್ರಿಕೆಯ ಉಪಸಂಪಾದಕ ಪ್ರಶಾಂತ್ ಎಸ್. ಸುವರ್ಣ ಅವರಿಗೆ ಈ ಬಾರಿಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಪತ್ರಕರ್ತೆ ಅನಿತಾ ಪಿಂಟೋ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಚಿಕ್ಕವಯಸ್ಸಿನಲ್ಲಿ ಸಮಾಜವನ್ನು ತಿದ್ದುವ ಕೆಲಸ ಬಹಳ ದೊಡ್ಡದಾಗಿರುತ್ತದೆ. ಅಂತಹ ಕೆಲಸವನನು ಕಿರಿಯ ಪತ್ರಕರ್ತ ಪ್ರಶಾಂತ್ ಎಸ್ ಸುವರ್ಣ ಅವರು ಮಾಡಿದ್ದಾರೆ ಎಂದು ಹೇಳಿದರು.ಪ್ರಶಸ್ತಿ ಸ್ವೀಕರಿಸಿ ಮತನಾಡಿದ ಪ್ರಶಾಂತ್ ಎಸ್ ಸುವರ್ಣ ಅವರು. ಪ್ರಶಸ್ತಿಗೆ ಆಯ್ಕೆ ಮಾಡಿದ ಸಂಘಟಕರು ಮತ್ತು ಆಯ್ಕೆಗಾರರು, ಪ.ಗೋ ಕುಟುಂಬಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ್ ಬಾಳಾ, ಹಿರಿಯ ಪತ್ರಕರ್ತ ಮನೋಹರ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಶರತ್ ಮಂಗಳೂರು