Header Ads
Breaking News

ಫರಂಗಿಪೇಟೆ ರೈಲ್ವೇ ಲೆವೆಲ್ ಕ್ರಾಸಿಂಗ್‌ಗೆ ಡಿಸಿ ಸಸಿಕಾಂತ್ ಸೆಂಥಿಲ್ ಭೇಟಿ: ಪರಿಶೀಲನೆ

ಬಂಟ್ವಾಳ: ಫರಂಗಿಪೇಟೆಯಲ್ಲಿ ರೈಲ್ವೇ ಅಧಿಕಾರಿಗಳಿಂದ ರೈಲ್ವೇ ಲೆವೆಲ್ ಕ್ರಾಸಿಂಗ್ ಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭೇಟಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಅವರು ರೈಲ್ವೆ ಲೆವೆಲ್‌ಕ್ರಾಸಿಂಗ್ ಬಂದ್ ಮಾಡಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಹಾಗೂ ಈಗಿರುವ ಅಂಡರ್‌ಪಾಸಿಂಗ್‌ನ ಅವೈಜ್ಞಾನಿಕತೆಯನ್ನು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.

ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ ರೈಲ್ವೇ ಇಲಾಖೆಯ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆಸೀಫ್ ಇಕ್ಬಾಲ್, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ವಿಕ್ರಂ ಫರಂಗಿಪೇಟೆ, ಬಂಟ್ವಾಳ ಗ್ರಾಮಾಂತರ ಎಸೈ ಪ್ರಸನ್ನ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *