Header Ads
Breaking News

ಫೆ.22ರಂದು ಕಾರ್ಕಳದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಬೆಳ್ಳಿ ಹಬ್ಬದ ಸಮಾರಂಭ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಇದರ 25ನೇ ವರ್ಷದ ಬೆಳ್ಳಿಹಬ್ಬ ಸಮಾರಂಭ ಫೆಬ್ರವರಿ 22 ಮತ್ತು 23 ರಂದು ನಡೆಯಲಿದೆ.

ಈ ಬಗ್ಗೆ ಉಡುಪಿಯಲ್ಲಿ ಸಮಿತಿಯ ಕೆ.ಪಿ ಶೆಣೈ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಕಾರ್ಯಕ್ರಮವು ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನ ಶಿಕ್ಷಣ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಬೆಳ್ಳಿ ಹಬ್ಬದ ಪ್ರಯುಕ್ತ ಕಾರ್ಕಳ ಗಾಂಧಿ ಮೈದಾನದಿಂದ ಎಸ್ ವಿ ಟಿ ಶಾಲೆಯವರೆಗೆ ಶೋಭಾಯಾತ್ರೆ ನಡೆಯಲಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿಟಿ ರವಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 25 ಜನ ಕೊಂಕಣಿ ಭಾಷಿಗರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎರಡು ದಿನಗಳ ಸಮಾರಂಭದಲ್ಲಿ ವಿವಿಧ ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Related posts

Leave a Reply

Your email address will not be published. Required fields are marked *