Header Ads
Breaking News

ಫೆ.27ರಂದು ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ

ಮಂಗಳೂರು ವಿಶ್ವವಿದ್ಯಾನಿಲಯದ 38ನೆ ಘಟಿಕೋತ್ಸವವು ಫೆ.27ರಂದು ಅಪರಾಹ್ನ 3 ಗಂಟೆಗೆ ವಿವಿಯ ಮಂಗಳಾ ಸಭಾಂಗಣದಲ್ಲಿ ಜರುಗಲಿದೆ ಎಂದು ವಿವಿಯ ಕುಲಪತಿ ಪ್ರೋ .ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ. ಘಟಿಕೋತ್ಸವಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಹ ಕುಲಾಧಿಪತಿ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಸಿ.ಎನ್. ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಘಟಿಕೋತ್ಸವದಲ್ಲಿ ಈ ಬಾರಿ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಕೆ.ಸಿ.ನಾಯ್ಕ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು ಎಂದು ಹೇಳಿದರು. ಅಲ್ಲದೆ, ಮಂಗಳೂರು ವಿವಿ ಆವರಣದಲ್ಲಿ ನಿರ್ಮಿಸಲಾದ ಯೋಧರ ಸ್ಮಾರಕ ‘ಶಹೀದ್ ಸ್ಥಳ’ದ ಉದ್ಘಾಟನೆಯನ್ನು ಸಚಿವ ಮುರಳೀಧರನ್ ಇದೇ ಸಂದರ್ಭ ನೆರವೇರಿಸಲಿದ್ದಾರೆ ಎಂದು ಕುಲಪತಿ ಪ್ರೊ.ಪಿ.ಎಸ್. ಯೆಡಪಡಿತ್ತಾಯ ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಿವಿ ಕುಲಸಚಿವರಾದ ಎ.ಎಂ.ಖಾನ್, ರವೀಂದ್ರ ಆಚಾರ್ಯ, ವಿಶೇಷ ಅಧಿಕಾರಿ ಜಯಶಂಕರ್, ಸಿಂಡಿಕೇಟ್ ಸದಸ್ಯ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *