Header Ads
Header Ads
Breaking News

ಫೆ.8ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಜಂತುಹುಳ ದಿನಾಚರಣೆ ನಡೆಯಲಿದೆ. ಫೆಬ್ರವರಿ 8ರಂದು ಜಿಲ್ಲೆಯಾದ್ಯಂತ 1 ರಿಂದ 19 ವರುಷದೊಳಗಿನ ಎಲ್ಲಾ ವಯೋಮನದವರಿಗೆ ಜಂತುಹಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು.

ಮಂಗಳೂರಿನ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವಿ ಪೂರ್ವ ಕಾಲೇಜು, ಐಟಿಐ ಶಾಲೆ ಹಾಗೂ ಅಂಗನವಾಡಿಗಳಲ್ಲಿ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 1 ವಾರ ತನಕ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 5,15,433 ಮಂದಿಗೆ ಮಾತ್ರೆಯನ್ನ ವಿತರಿಸುವ ಗುರಿ ಹೊಂದಲಾಗಿದೆ. ಕಳೆದ ವರುಷ 98ಶೇಕಡಾದಷ್ಟು ಸಾಧನೆಯಾಗಿದೆ. ಮಾತ್ರೆಯಿಂದಾಗಿ ಯಾವುದೇ ತೊಂದರೆ ಆಗಲ್ಲ, ಜನಸಾಮಾನ್ಯರು ಯಾವುದೇ ಭಯ ಪಡುವ ಅಗತ್ಯವಿಲ್ಲ ಅಂತಾ ಹೇಳಿದರು.

ಜಂತುಹುಳ ನಾಶ ಪಡಿಸುವ ನಿಟ್ಟಿನಲ್ಲಿ ಈ ಮಾತ್ರೆಯನ್ನು ನೀಡಲಾಗುತ್ತದೆ. ಮಾತ್ರೆ ಸೇವಿಸುವುದರಿಂದ ರಕ್ತಹೀನತೆಯನ್ನ ತಡೆಗಟ್ಟುವುದು. ಪೌಷ್ಠಿಕತೆಯಲ್ಲಿ ಸುಧಾರಣೆ, ರೋಗನಿರೋಧಕ ಶಕ್ತಿ ಹೆಚ್ಚಾಗುವುದು. ಮಕ್ಕಳಲ್ಲಿ ಏಕಾಗ್ರತೆ, ಕಲಿಕೆಯ ಶಕ್ತಿ ಹಾಗೂ ಶಾಲಾ ಹಾಜರಾತಿ ಸುಧಾರಿಸುವುದು. ಜಂತುಹುಳ ಭಾದೆ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದು ನಿಯಂತ್ರಿಸಲ್ಪಡುತ್ತದೆ ಅಂತಾ ಸುದ್ಧಿಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆರ್‍ಎಚ್.ಸಿ ಅಧಿಕಾರಿ ಡಾ.ರಾಜೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ.ನವೀನ್ ಚಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply