Breaking News

ಫ್ರೆಂಚ್ ಓಪನ್ ಟೆನ್ನಿಸ್, ಜಾಕೋವಿಕ್ ಹೊರಕ್ಕೆ, ನಡಾಲ್ ಸೆಮಿಗೆ, ಮಿಕ್ಸೆಡ್ ಡಬಲ್ಸ್‌ನಲ್ಲಿ ಬೋಪಣ್ಣ ಫೈನಲ್ಲಿಗೆ

ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವ ಹಂಬಲದಲ್ಲಿದ್ದ ಸರ್ಬಿಯಾದ ನೊವಾಕ್ ಜೊಕೊವಿಚ್ ಅವರು ಬುಧವಾರ ಆಘಾತ ಅನುಭವಿಸಿದ್ದಾರೆ. ವಿಶ್ವ ಕ್ರಮಾಂಕಪಟ್ಟಿಯಲ್ಲಿ ಎರಡನೇ ಸ್ಥಾನ ಹೊಂದಿರುವ ನೊವಾಕ್ ಅವರು ಕ್ವಾರ್ಟರ್ ಫೈನಲ್ನಲ್ಲಿ ಸೋಲು ಕಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಹೋರಾಟದಲ್ಲಿ ಆಸ್ಟ್ರಿಯಾದ ಡೊಮಿನಿಕ್ ಥಿಯೆಮ್ ೭-೬, ೬-೩, ೬-೦ರಲ್ಲಿ ಹಾಲಿ ಚಾಂಪಿಯನ್ ನೊವಾಕ್ ಅವರನ್ನು ಮಣಿಸಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಇಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರ ಎನಿಸಿದ್ದ ನೊವಾಕ್ ಮೊದಲ ಸೆಟ್ನಲ್ಲಿ ದಿಟ್ಟ ಹೋರಾಟ ನಡೆಸಿದರು. ಆರನೇ ಶ್ರೇಯಾಂಕ ಹೊಂದಿದ್ದ ಥಿಯೆಮ್ ಕೂಡ ಮೋಡಿ ಮಾಡಿದರು. ಇನ್ನೊಂದು ಪಂದ್ಯದಲ್ಲಿ ಸ್ಪೇನ್ನ ರಫೆಲ್ ನಡಾಲ್ ೬-೨, ೨-೦ರಲ್ಲಿ ತಮ್ಮದೇ ದೇಶದ ಪ್ಯಾಬ್ಲೊ ಕರೆನೊ ವಿರುದ್ಧ ಗೆದ್ದರು. ಎಂಟರ ಘಟ್ಟದ ಮತ್ತೊಂದು ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್ನ ೩೨ ವರ್ಷದ ಆಟಗಾರ ಸ್ಟಾನಿಸ್ಲಾಸ್ ವಾವ್ರಿಂಕ ೬-೩, ೬-೩, ೬-೧ರಲ್ಲಿ ಕ್ರೊವೇಷ್ಯಾದ ಮರಿನ್ ಸಿಲಿಕ್ ಅವರನ್ನು ಪರಾಭವಗೊಳಿಸಿದರು. ಈ ಮೂಲಕ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಹಿರಿಯ ಆಟಗಾರ ಎಂಬ ಹಿರಿಮೆ ತಮ್ಮದಾಗಿಸಿಕೊಂಡರು.
ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುಮೇನಿ ಯಾದ ಸಿಮೊನಾ ಹಲೆಪ್ ೩-೬, ೭-೬, ೬-೦ರಲ್ಲಿ ಎಲಿನಾ ಸ್ವಿಟೋಲಿನಾ ಅವರನ್ನು ಮಣಿಸಿದರು. ಇನ್ನೊಂದು ಹಣಾಹಣಿಯಲ್ಲಿ ಕ್ಯಾರೋಲಿನಾ ಪ್ಲಿಸ್ಕೋ ವಾ ೭-೬, ೬-೪ ರಲ್ಲಿ ಕ್ಯಾರೋಲಿನಾ ಗಾರ್ಸಿಯಾ ವಿರುದ್ಧ ಗೆದ್ದರು. ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ಕೆನಡಾದ ಗೇಬ್ರಿಯೆಲಾ ದಬ್ರೋವ್ಸ್ಕಿ ಅವರು ಫೈನಲ್ ಪ್ರವೇಶಿಸಿದರು.

Related posts

Leave a Reply