Header Ads
Header Ads
Breaking News

ಬಂಗಾಳಕೊಲ್ಲಿಯಲ್ಲಿ ತಿತ್ಲಿ ಚಂಡಮಾರುತದ ಪ್ರಭಾವ:ಕರಾವಳಿ ತೀರದಲ್ಲೂ ಬಿರುಸುಗೊಂಡ ಕಡಲು

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಆಂಧ್ರ ಮತ್ತು ಒಡಿಶಾದಲ್ಲಿ ಕಾಣಿಸಿಕೊಂದ ಚಂಡಮಾರುತದ ಪ್ರಭಾವ ಪಶ್ಚಿಮ ಕರಾವಳಿಯ ಮೇಲೂ ಆಗಿದೆ.ಬುಧವಾರ ಬೆಳಿಗ್ಗಿನಿಂದಲೇ ಪಣಂಬೂರು, ಉಳ್ಳಾಲ, ಸೋಮೇಶ್ವರ-ಉಚ್ಚಿಲದ ಹಲವು ಕಡೆ ಕಡಲಿ ಅಬ್ಬರ ಮಿತಿ ಮೀರಿದೆ. ಈ ಹಿಂದೆ ಎಂದೂ ಕೂಡಾ ಕಂಡರಿಯದಂತಹ ವಾತಾವರಣ ಕಡಲ ತೀರದಲ್ಲಿ ಕಂಡು ಬಂದಿದೆ. ಸಮುದ್ರದ ಅಲೆಗಳು ಭಾರೀ ಎತ್ತರಕ್ಕೆ ಅಪ್ಪಳಿಸುತ್ತಿದ್ದು, ಮೀನುಗಾರರು ಭಯಭೀತಿಗೊಂಡು ಸಮುದ್ರಕ್ಕಿಳಿಯಲಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪಣಂಬೂರು ಬೀಚ್‌ನಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ. ಈ ನಡುವೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಂಭವವೂ ಇದೆ ಎನ್ನಲಾಗಿದೆ. ಇನ್ನೂ ಅಕ್ಟೋಬರ್ 13ರ ವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

Related posts

Leave a Reply