Header Ads
Breaking News

ಬಂಟರ ಸಮಾಜದವರು ಎಲ್ಲಾ ಕ್ಷೇತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ : ಐಕಳ ಹರೀಶ್ ಶೆಟ್ಟಿ ಹೇಳಿಕೆ

ಬಂಟರ ಸಮಾಜದವರು ಇಂದಿನ ದಿನದಲ್ಲಿ ಎಲ್ಲಾ ಕ್ಷೇತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ಅವರು ಬಂಟರ ಸಂಘ ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಬಂಟರ ಸಂಘ ಸುರತ್ಕಲ್ ಇದರ ಸಹಕಾರದಿಂದ ನಿರ್ಮಿಸಲ್ಪಟ್ಟ ಎರಡು ಮನೆಗಳ ಕೀಯನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದರು. ಸಂಘದಿಂದ ಸಮಾಜವನ್ನು ಒಗ್ಗೂಡಿಸುವ ಕೆಲಸ ಮತ್ತು ಅರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ ನೀಡುವ ಕೆಲಸ ಮಾಡಬೇಕು, ಮಕ್ಕಳಿಗೆ ಸಂಸ್ಕಾರ ಸಂಸ್ಕ್ರತಿ ಬಗ್ಗೆ ತಿಳಿ ಹೇಳಬೇಕು ಎಂದರು.

ಸಮಾರಂಭದ ಉದ್ಘಾಟನೆಯನ್ನು ಬಂಟರ ಯಾನೆ ನಾವಡರ ಮಾತೃ ಸಂಘ ಮಂಗಳೂರು ಅಧ್ಯಕ್ಷ ಮಾಲಾಡಿ ಅಜಿತ್‍ಕುಮಾರ್ ರೈ ಅವರು ನೆರವೇರಿಸಿ ಯಾವುದೇ ಸಂಘ ಸ್ಥಾಪನೆ ಮಾಡುವ ಹಿಂದಿನ ಉದ್ದೇಶವೆಂದೆ ಸಂಘದ ಮುಖಾಂತರ ಸಮಾಜದ ಜನತೆಗೆ ಒಳ್ಳೆಯ ಸಂಸ್ಕಾರ ಸಂಸ್ಕೃತಿ ಮೂಲಕ ಸಾಮಾಜಿಕ, ಧಾರ್ಮಿಕವಾಗಿ ಎಲ್ಲ ಜನರೊಂದಿಗೆ ಬೆರೆಯುವಂತಹ ಕೆಲಸವನ್ನು ಮಾಡುತ್ತಾ ಮುನ್ನಡೆಸಬೇಕೆಂಬುದು ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಘದ ಮಾಹಿತಿ ಪುಸ್ತಕ ಬಿಡುಗಡೆ ಶ್ರೀದೇವಿ ಎಜುಕೇಶನಲ್ ಟ್ರಸ್ಟ್ ಚೇರ್‍ಮೆನ್ ಎ.ಸದಾನಂದ ಶೆಟ್ಟಿ ಬಿಡುಗಡೆಗೊಳಿಸಿದರು. ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಭಿನಂದಿಸಲಾಯಿತು, ವಿಧವೆಯರಿಗೆ, ಭಿನ್ನ ಸಾಮಾಥ್ರ್ಯ ದವರಿಗೆ ಹಾಗೂ ವಿಕಲಚೇತನರಿಗೆ ಸಹಾಯ ಹಸ್ತವನ್ನು ನೀಡಲಾಯಿತು. ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸುರತ್ಕಲ್ ಬಂಟರ ಸಂಘದ ಗ್ರಾಮವಾರು ಸಾಂಸ್ಕøತಿಕ ಸ್ಪರ್ಧೆಯಲ್ಲಿ ಇಡ್ಯಾ ಗ್ರಾಮ ಪ್ರಥಮ, ಚೇಳ್ಯಾರು ದ್ವಿತೀಯ, ಸುರತ್ಕಲ್ ತೃತೀಯ ಪ್ರಶಸ್ತಿ ಪಡೆಯಿತು.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ಪಡುಬಿದ್ರೆ ಬಂಟರ ಸಂಘ ಅಧ್ಯಕ್ಷ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಗ್ರೂಪ್ ಆಫ್ ಹೋಟೆಲ್ಸ್ ಮಲಾಡ್, ಮುಂಬೈ ಇದರ ಆಡಳಿತ ನಿರ್ದೇಶಕ ಬಾಬು ಶೆಟ್ಟಿ ಪೆರಾರ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *