Header Ads
Header Ads
Breaking News

ಬಂಟ್ವಾಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಭೇಟಿ : ಮೆಚ್ಚುಗೆ ವ್ಯಕ್ತಪಡಿಸಿದ ಲೋಕಾಯುಕ್ತರು

ಬಂಟ್ವಾಳ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರು ಶನಿವಾರ ಬಂಟ್ವಾಳದ ಸಮಾಜ ಕಲ್ಯಾಣ ಇಲಾಖೆಯ ಎರಡು ವಸತಿ ಶಾಲೆಗಳು ಹಾಗೂ ಬಂಟ್ವಾಳ ಸರಕಾರಿ ಆಸ್ಪತೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿ.ಸಿ.ರೋಡಿನ ತಾಲೂಕು ಪಂಚಾಯತಿ ಕಚೇರಿ ಬಳಿ ಇರುವ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ದಿನಚರಿ, ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಇಲ್ಲಿನ ಆರೋಗ್ಯ ಸೇವೆಯ ಬಗ್ಗೆ ವೈದ್ಯಾಧಿಕಾರಿ ಡಾ. ಸದಾಶಿವ ಅವರಿಂದ ಮಾಹಿತಿ ಪಡೆದುಕೊಂಡು ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಾಯುಕ್ತರು, ವೈದ್ಯರು ಹೆಚ್ಚಿನ ಕಾಳಜಿಯಿಂದ ರೋಗಿಗಳಿಗೆ ಶುಶ್ರೂಷೆ ಮಾಡುತ್ತಿರುವುದು ಭೇಟಿಯಿಂದ ಗಮನಕ್ಕೆ ಬಂದಿದೆ. ವೈದ್ಯರು ಉತ್ತಮ ಸೇವೆ ನೀಡುತ್ತಿರುವುದರಿಂದ ಈ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಆಸ್ಪತ್ರೆಗೆ ಎಷ್ಟೇ ಮೂಲಭೂತ ಸೌಲಭ್ಯ ಒದಗಿಸಿ ಕೊಟ್ಟರೂ ಕೂಡ ವೈದ್ಯರು ಉತ್ತಮ ಸೇವೆ ನೀಡದಿದ್ದರೆ ಆಸ್ಪತ್ರೆಗೆ ರೋಗಿಗಳು ಬರುವುದಿಲ್ಲ. ಕೆಲವೊಂದು ಸಮಸ್ಯೆಗಳು ಇರುವುದು ಗಮನಕ್ಕೆ ಬಂದಿದ್ದು ಸರಕಾರದ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ಸುಧಾರಣೆಯ ಅವಶ್ಯಕತೆಯಿದೆ. ಕಟ್ಟಡದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಗಮನವಹಿಸಿರುವುದು ಕಾಣುತ್ತಿಲ್ಲ ಎಂದರು. ಮುಂದಿನ ಒಂದು ತಿಂಗಳೊಳಗಾಗಿ ಎರಡು ಹಾಸ್ಟೇಲ್‌ಗಳನ್ನು ಸುಧಾರಣೆ ಮಾಡಬೇಕು, ಅಧಿಕಾರಿಗಳು ತನ್ನ ಸೂಚನೆಯನ್ನು ಪಾಲಿಸುತ್ತಾರೆ ಎನ್ನುವ ನಂಬಿಕೆ ಇದೆ, ಬಡಕುಟುಂಬದ ಮಕ್ಕಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಕಟ್ಟಡವನ್ನು ಹೊರತು ಪಡಿಸಿದರೆ ಇಲ್ಲಿನ ವ್ಯವಸ್ಥೆಗಳೆಲ್ಲವೂ ಉತ್ತಮವಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಬಂಟ್ವಾಳ ಉಪವಿಭಾಗದ ಎಎಸ್ಪಿ ಸೈದುಲ್ ಅಡಾವತ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಪ್ರಭು, ಸಮಾಜ ಕಲ್ಯಾಣಾಧಿಕಾರಿ ಮೋಹನ್ ಕುಮಾರ್ ಮೊದಲಾದವರು ಹಾಜರಿದ್ದರು.

Related posts

Leave a Reply

Your email address will not be published. Required fields are marked *