Header Ads
Header Ads
Breaking News

ಬಂಟ್ವಾಳದಲ್ಲಿ ಗಣರಾಜ್ಯೋತ್ಸವ ಸಂಭ್ರಮ:ತಹಶೀಲ್ದಾರ್ ರಶ್ಮಿ ಅವರಿಂದ ಧ್ವಜಾರೋಹಣ

ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಮುಂಭಾಗ ಆಚರಿಸಲಾಯಿತು. ತಹಶೀಲ್ದಾರ್ ರಶ್ಮಿ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಪೂರ್ವಭಾವಿಯಾಗಿ ಪೊಲೀಸ್, ಗೃಹ ರಕ್ಷಕ ದಳ, ಎನ್ ಸಿ ಸಿ, ಭಾರತ ಸೇವಾದಳ, ಸ್ಕೌಟ್ಸ್ ಗೈಡ್ಸ್, ಕಬ್ ಗೈಡ್ಸ್, ಬುಲ್ ಬುಲ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವ ಮೆರವಣಿಗೆ ನಡೆಯಿತು. ಧ್ವಜಾರೋಹಣದ ಬಳಿಕ ವಿವಿಧ ತುಕುಡಿಗಳಿಂದ ಪಥಸಂಚಲನ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಶ್ಮಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಶಾಸಕ ರಾಜೇಶ ನಾಯಕ್ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕ ವಿಠಲ ನಾಯಕ್ ಪ್ರಧಾನ ಭಾಷಣ ಮಾಡಿದರು. ವೇದಿಕೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶ್ಯಾಂ ರಾವ್ ಆಚಾರ್ಯ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಎಎಸ್ಪಿ ಸೈದುಲ್ ಅಡಾವಟ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಪಿಡಬ್ಲ್ಯುಡಿ ಎಂಜಿನಿಯರ್ ಉಮೇಶ್ ಭಟ್, ಸಿಡಿಪಿಒ ಸುಧಾಜೋಷಿ ವೇದಿಕೆಯಲ್ಲಿದ್ದರು.

Related posts

Leave a Reply