Header Ads
Header Ads
Breaking News

ಬಂಟ್ವಾಳದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ : ಪೊಲೀಸ್ ಇಲಾಖೆಯ ವತಿಯಿಂದ ಸಚಿವರಿಗೆ ಗೌರವ ವಂದನೆ

ಬಂಟ್ವಾಳ: ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಪಶ್ಚಿಮ ವಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯನ್ನು ಬಂಟ್ವಾಳದ ಪ್ರವಾಸಿ ಬಂಗಲೆಯಲ್ಲಿ ನಡೆಸಿದರು. ಬಂಟ್ವಾಳ ತಾಲೂಕಾಡಳಿತದ ವತಿಯಿಂದ ಶಾಸಕ ರಾಜೇಶ್ ನಾಕ್ ಹಾಗೂ ತಹಶೀಲ್ದಾರ್ ರಶ್ಮಿ.ಎಸ್. ಆರ್. ಅವರು ಗೃಹ ಸಚಿವರನ್ನು ಸ್ವಾಗತಿಸಿಕೊಂಡರು. ಪೊಲೀಸ್ ಇಲಾಖೆಯ ವತಿಯಿಂದ ಸಚಿವರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ್ ಬೊಮ್ಮಾಯಿ ಕರಾವಳಿ ರಕ್ಷಣಾ ಪಡೆಯನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ಬಗ್ಗೆ ತೀರ್ಮಾನ, ರಾತ್ರಿ ಪಾಳಿಗೆ ಜನಸ್ನೇಹಿ ಯೋಜನೆಯನ್ನು ಜಾರಿ ತರುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದಜೇಗೇರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದರು.
ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ವೇತನ ವಿಳಂಬ ಪಾವತಿ ಸಹಿತ ಸವಲತ್ತುಗಳನ್ನು ನೀಡುವ ಬಗ್ಗೆ ಡಿಐಜಿ ಅವರು ಅಧ್ಯಯನ ಮಾಡುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಶೀಘ್ರ ನಿರ್ಣಯವನ್ನು ಕೈಗೊಳ್ಳಲಾಗುವುದು. ಹುಬ್ಬಳ್ಳಿ ಬಾಂಬ್ ಬ್ಲಾಸ್ಟ್ ಪ್ರಕರಣ ನಡೆದ ಬಳಿಕ ಕರಾವಳಿಯಲ್ಲೂ ಕಟ್ಟೆಚ್ಚರ ವಹಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಅಗತ್ಯವಿರುವೆಡೆಗಳಿಗೆ ಪ್ರಸ್ತಾವನೆ ಸಲ್ಲಿಸಿದರೆ ಮುಂದಿನ ಬಜೆಟ್‌ನಲ್ಲಿ ಅನುಕೂಲ ಮಾಡಿಕೊಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಈ ಸಂದರ್ಬ ಪಶ್ಚಿಮ ವಲಯದ ಐಜಿಪಿ ಶಾಸಕ ಯು.ರಾಜೇಶ್ ನಾಯ್ಕ್, ಪಶ್ಚಿಮವಲಯದ ಐಜಿಪಿ ಅರುಣ್ ಚಕ್ರವರ್ತಿ, ದ.ಕ.ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್, ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್, ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡೆ, ಕಾರವಾರ ಎಸ್ಪಿ ಶಿವಪ್ರಕಾಶ್, ಪುತ್ತೂರು ವಿಭಾಗದ ಡಿವೈಎಸ್ಪಿ ದಿನಕರಶೆಟ್ಟಿ, ಬಂಟ್ವಾಳ ಸಿಐ ನಾಗರಾಜ್ ಟಿ.ಡಿ. ಸಹಿತ ವಿವಿಧ ಠಾಣೆಯ ಪಿಎಸ್ ಐ ಗಳು ಮತ್ತು ಬಂಟ್ವಾಳ ಕೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ,ಪುರಸಭಾ ಸದಸ್ಯ ಗೋವಿಂದ ಪ್ರಭು ,ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಜಿ.ಕೆ. ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ,ತಾಪಂಸದಸ್ಯ ಪ್ರಭಾಕರಪ್ರಭು,ಪುರುಷೋತ್ತಮ ಶೆಟ್ಟಿ,ಉದಯಕುಮಾರ್ ರಾವ್ ಬಂಟ್ವಾಳ ಮೊದಲಾದವರಿದ್ದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗೃಹಸಚಿವರು ಪೊಲೀಸ್ ಪಶ್ಚಿಮವಲಯ ವ್ಯಾಪ್ತಿಯ ಅಧಿಕಾರಿಗಳ ಪ್ರಗತಿಪರಿಶೀಲನೆಯನ್ನು ಬಂಟ್ವಾಳ ಪ್ರವಾಸಿಮಂದಿರದಲ್ಲಿ ನಡೆಸಿದರು.

Related posts

Leave a Reply

Your email address will not be published. Required fields are marked *