Header Ads
Header Ads
Breaking News

ಬಂಟ್ವಾಳದಲ್ಲಿ ತಾಲೂಕು ಮಟ್ಟದ ವಾಲ್ಮೀಕಿ ಜಯಂತಿ

ಬಂಟ್ವಾಳ: ನಮ್ಮ ಸ್ವಾರ್ಥಕ್ಕಾಗಿ ದೇಶದ ಮಹಾನ್ ವ್ಯಕ್ತಿಗಳನ್ನು ಕೇವಲ ಒಂದು ಜಾತಿ, ವರ್ಗಕ್ಕೆ ಸೀಮಿತಗೊಳಿಸುವಂತಹ ಪ್ರಕ್ರಿಯೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದೆ. ಶ್ರೇಷ್ಠ ವ್ಯಕ್ತಿಗಳ ಜೀವನ ಸಾಧನೆಯನ್ನು ತಮ್ ಜೀವನದಲ್ಲಿ ಅಳವಡಿಸಿಕೊಳ್ಳುತ್ತಿರುವುದು ಕಡಿಮೆಯಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಹೇಳಿದರು.ಬಂಟ್ವಾಳ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಮಕ್ಕಳ ಸಾಹಿತಿ ಭಾಸ್ಕರ ಅಡ್ವಳ ಮಾತನಾಡಿ ಕತ್ತಿ ಹಿಡಿಯುತ್ತಿದ್ದ ಕೈ ಲೇಖನಿ ಹಿಡಿದು ಇಡೀ ಸಮಾಜದಲ್ಲಿ ಪರಿವರ್ತನೆ ಮಾಡಿದ ವ್ಯಕ್ತಿ ವಾಲ್ಮೀಕಿ ಎಂದರು. ವಾಲ್ಮೀಕಿ ತನ್ನ ಸಾಧನೆಯ ಮೂಲಕ ಜಗತ್ತಿಗೆ ಬೆಳಕು ನೀಡಿದ. ನಾವು ನಮ್ಮ ನಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಬೆಳಕು ಚೆಲ್ಲುವ ಕಾರ್ಯ ಮಾಡಬೇಕಾಗಿದೆ, ವಾಲ್ಮೀಕಿಯಂತೆ ಕರ್ತವ್ಯ ನಿಷ್ಠೆ, ಸ್ವಾಮಿ ಭಕ್ತಿ, ಸಮಯಪ್ರಜ್ಞೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು. ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ತಹಶೀಲ್ದಾರ್ ಪುರಂದರಹೆಗ್ಡೆ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಸಮಾಜ ಕಲ್ಯಾಣಾಧಿಕಾರಿ ಮೋಹನ್ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply