Header Ads
Header Ads
Header Ads
Breaking News

ಬಂಟ್ವಾಳದಲ್ಲಿ ವಿವಿಧ ಸರ್ಕಾರಿ ಕಟ್ಟಡಗಳ ಉದ್ಘಾಟನೆ

ಬಂಟ್ವಾಳದ ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಸರಕಾರಿ ಕಟ್ಟಡಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭ ಜನಜಾತ್ರೆಯ ಮಧ್ಯೆ ನೆರವೇರಿತು. ಕೈಕಂಬದಲ್ಲಿ ಸಚಿವ ರಮಾನಾಥ ರೈವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಹಿತ ವಿವಿಧ ಖಾತೆಯ ಸಚಿವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.

ಮದ್ಯಾಹ್ನ 12 ಗಂಟೆಗೆ ಸರಿಯಾಗಿ ಸಿ.ಎಂ. ಬಿ.ಸಿರೋಡು ತಲುಪಿದರು. ಪೊಲೀಸ್ ದಳದ ಗೌರವ ವಂದನೆ ಸ್ವೀಕರಿಸಿ ಮಿನಿ ವಿಧಾನಸೌಧವನ್ನು ಉದ್ಘಾಟಿಸಿದರು. ಕಟ್ಟಡದ ಒಳಾಂಗಣವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಮುಖ್ಯಮಂತ್ರಿ ಹಾಗೂ ಸಚಿವರ ದಂಡು ಹವಾನಿಯಂತ್ರಿತ ಬಸ್ ಮೂಲಕ ನಗರ ಸಂಚಾರ ಆರಂಭಿಸಿದರು.
ಕೈಕುಂಜೆ ಬಳಿಯಲ್ಲಿ ನಿರ್ಮಾಣಗೊಂಡಿರುವ ಮೆಸ್ಕಾಂ ಕಚೇರಿಯನ್ನು ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಬಳಿಕ ಬಸ್ ಮೂಲಕ ಬಂಟ್ವಾಳಕ್ಕೆ ತೆರಳಿದರು. ಲೋಕೋಪಯೋಗಿ ಸಚಿವ ಎಚ್.ಸಿ. ಮಹಾದೇವಪ್ಪ ನೂತನ ನಿರೀಕ್ಷಣ ಮಂದಿರವನ್ನು ಉದ್ಘಾಟಿಸಿದರು. ಅರಣ್ಯ ಸಚಿವ ಬಿ.ರಮಾನಾಥ ರೈ ಟ್ರೀ ಪಾರ್ಕ್ ಉದ್ಘಾಟಿಸಿದರು. ಪುರಸಭೆಯ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಸಚಿವ ರೋಷನ್ ಬೇಗ್ ಲೋಕಾರ್ಪಣೆಗೊಳಿಸಿದರು. 100 ಹಾಸಿಗೆಯ ಸರಕಾರಿ ಆಸ್ಪತ್ರೆಯನ್ನು ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಹಿರಿಯ ಸಾಹಿತಿ ಪಂಜೆ ಮಂಗೇಶ್‌ರಾಯರ ಸ್ಮಾರಕ ಭವನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಸಿದಿರು. ಬಳಿಕ ಮತ್ತೆ ಬಿ.ಸಿ.ರೋಡಿನತ್ತ ಪಯಣ ಬೆಳೆಸಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಸಭಾ ವೇದಿಕೆಯತ್ತ ನಡೆದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಿಎಂ ಬಹುಗ್ರಾಮ ಯೋಜನೆಯ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ಚೆಕ್ ವಿತರಿಸಿದರು.

Related posts

Leave a Reply