Header Ads
Breaking News

ವರ್ಷಗಳ ಕಾಲ ಕಾದರೂ ಅಭಿವೃದ್ಧಿಗೊಳ್ಳದ ರಸ್ತೆ!: ತಾವೇ ರಸ್ತೆ ನಿರ್ಮಿಸಲು ಮುಂದಾದ ಗ್ರಾಮಸ್ಥರು!

ಫರಂಗಿಪೇಟೆಯ ಲೆವೆಲ್‌ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ಫಲಕ ಹಾಕಿದ್ದಾರೆ. ಒಂದು ವಾರ ಕಳೆದರೂ ಇನ್ನೂ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ರಸ್ತೆ ಮುಕ್ತಗೊಳಿಸದ ಹಿನ್ನಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಲೆವೆಲ್ ಕ್ರಾಸಿಂಗ್ ಬಳಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮ್ಮರ್ ಫಾರೂಕ್, ತಾ.ಪಂ.ಮಾಜಿ ಸದಸ್ಯ ಆಸೀಫ್‌ಇಕ್ಬಾಲ್, ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರ ನೇತೃತ್ವದಲ್ಲಿ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿ ರೈಲ್ವೇ ಇಲಾಖೆಯ ನಿರ್ಲಕ್ಷ ಧೋರಣೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಮೂರು ದಿನದೊಳಗಾಗಿ ಹಳಿ ದುರಸ್ತಿಕಾರ್ಯ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿಕೊಡುವುದಾಗಿ ರೈಲ್ವೇ ಇಲಾಖೆಯ ಇಂಜಿನಿಯರ್ ದೂರವಾಣಿಯ ಮೂಲಕ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಈ ಸಂದರ್ಭ ಲೀಡಿಯಾ ಪಿಂಟೋ, ಹಾಶೀರ್ ಪೇರಿಮಾರ್, ರಿಯಾಝ್ ಕುಂಪಣಮಜಲು, ಝಾಹೀರ್ ಅಬ್ಬಾಸ್, ಮೊದಲಾದವರು ಹಾಜರಿದ್ದರು.

Related posts

Leave a Reply

Your email address will not be published. Required fields are marked *