Header Ads
Breaking News

ಬಂಟ್ವಾಳದ ಚೆನ್ನ ಫಾರೂಕ್ ಹತ್ಯೆ ಪ್ರಕರಣ: ಪರಾರಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಬಂಟ್ವಾಳದ ಮೆಲ್ಕಾರ್‍ನಲ್ಲಿ ನಡೆದ ಚೆನ್ನ ಫಾರೂಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್ ಐ ಅವಿನಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಸಮೀಪದಿಂದ ಬಂಧಿಸಿದ್ದಾರೆ.

ತೊಕ್ಕೊಟ್ಟುವಿನಲ್ಲಿ ವಾಸವಾಗಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತ ಆರೋಪಿಗಳು. ಮೆಲ್ಕಾರ್ ಸಮೀಪ ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಸಂಜೆ ಬಂಧಿಸಿದೆ. ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ನಡೆಸಿತ್ತು.

Related posts

Leave a Reply

Your email address will not be published. Required fields are marked *